ಹಲಗೂರು: ಸಮೀಪದ ಗುಂಡಾಪುರ ಗೇಟ್ ಬಳಿ ಇರುವ ಅರಣ್ಯ ಇಲಾಖೆ ಕಚೇರಿ ಹಿಂಭಾಗದಲ್ಲಿ ಗುರುವಾರ ಬೆಳಿಗ್ಗೆ ಎರಡು ಕಾಡಾನೆಗಳು ಕಾಣಿಸಿಕೊಂಡು ಜನರಲ್ಲಿ ಅತಂಕ ಉಂಟು ಮಾಡಿದವು.

ಕಾವೇರಿ ವನ್ಯಜೀವಿ ವಲಯದ ಡಿಸಿಎಫ್ ಸುರೇಂದ್ರ ಮಾರ್ಗದರ್ಶನದಲ್ಲಿ ಗುರುವಾರ ಸಂಜೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ಗಂಡು ಮತ್ತು ಹೆಣ್ಣು ಆನೆಯನ್ನು ಹಲಗೂರು ಪಿಎಸ್ಐ ಸಹಕಾರದೊಂದಿಗೆ ಸುರಕ್ಷಿತವಾಗಿ ರಾಷ್ಟ್ರೀಯ ಹೆದ್ದಾರಿ ದಾಟಿಸಿ ರಾತ್ರಿ 8 ಗಂಟೆಗೆ ಬಸವನಬೆಟ್ಡ ಅರಣ್ಯ ವಲಯಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು.

ಕಾರ್ಯಾಚರಣೆಯಲ್ಲಿ ಕಾವೇರಿ ವನ್ಯಜೀವಿ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಮೋದ್ ಕುಮಾರ್ ದೇವ್, ಅನಿಲ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ನಿಹಾಲ್ ಗಸ್ತು ಅರಣ್ಯ ಪಾಲಕರು, ಆನೆ ಕಾರ್ಯಪಡೆಯ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-15-505800585

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.