ಮಾಗಡಿ: ಕೆಂಪೇಗೌಡರ ಐತಿಹಾಸಿಕ ಕೋಟೆ ಅಭಿವೃದ್ಧಿಗೆ ₹103 ಕೋಟಿ ಅನುದಾನ ಬಿಡುಗಡೆ ಆಗಿದೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಹೇಳಿದರು.

ಪಟ್ಟಣದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡರ ಕೋಟೆ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್, ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಶ್ರಮದಿಂದ ಕೋಟೆ ಕಾಮಗಾರಿಗೆ ಹಣ ಬಿಡುಗಡೆಯಾಗಿದೆ. ಇದರಲ್ಲಿ ಶಾಸಕ ಬಾಲಕೃಷ್ಣ ಅವರ ಪಾತ್ರವೇನು ಇಲ್ಲ. ಜನಸಾಮಾನ್ಯರ ತೆರಿಗೆ ಹಣವನ್ನು ಅಭಿವೃದ್ಧಿಗಾಗಿ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಮೇಲ್ಸತುವೆ ಏಕೆ ಮಾಡಲಿಲ್ಲ: ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿರುವ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಕೋಟೆ ಕಂದಕ ಹಾಗೂ ಹೊಂಬಾಳಮ್ಮನಕೆರೆ ಒತ್ತುವರಿ ಮಾಡಿ ರಸ್ತೆ ಕಾಮಗಾರಿ ಮಾಡುವ ಬದಲು ಕೋಟೆ ಜಾಗ ಬರುವ ಮೊದಲೇ ಮೇಲ್ಸುತುವೆ ಮಾಡಿ ರಸ್ತೆ ನಿರ್ಮಾಣ ಮಾಡಿದರೆ ಕೋಟೆ ಕಂದಕ ಒತ್ತುವರಿ ಕೂಡ ಆಗುತ್ತಿರಲಿಲ್ಲ. ಹೊಂಬಾಳಮ್ಮನಕೆರೆ ಕೂಡ ಅಭಿವೃದ್ಧಿಯಾಗುತ್ತಿತ್ತು. ಆದರೆ, ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ಅಭಿವೃದ್ಧಿ ವಿಚಾರ ಬಹಿರಂಗಪಡಿಸಲಿ: ರಾಜ್ಯ ಸರ್ಕಾರ ₹103ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದು ಯಾವ ರೀತಿ ಕೋಟೆ ಅಭಿವೃದ್ಧಿ ಮಾಡುತ್ತೇವೆ ಎಂಬುದರ ಬಗ್ಗೆ ಸಾರ್ವಜನಿಕವಾಗಿ ಶಾಸಕ ಬಾಲಕೃಷ್ಣ ಅವರು ಕಾಮಗಾರಿ ವಿವರ ಇರುವ ನಾಮಫಲಕ ಹಾಕಿಸಬೇಕು. ಕೋಟೆ ನಾಲ್ಕು ಭಾಗದಲ್ಲಿ ಕಂದಕ ಮಣ್ಣು ತೆಗೆಸಬೇಕು. ಕೋಟೆಗೆ ಮುಖ್ಯವಾಗಿ ಬಾಗಿಲು ನಿರ್ಮಾಣ ಮಾಡಬೇಕು ಎಂದರು.

ಯಾವ ತನಿಖೆಗೂ ಸಿದ್ಧ: ‘ಶಾಸಕ ಬಾಲಕೃಷ್ಣ ಅವರು ಭೂಕಬಳಿಕೆ ಬಗ್ಗೆ ಹೇಳಿಕೆ ನೀಡಿದ್ದು ಇದಕ್ಕೆ ಬದ್ಧನಾಗಿದ್ದೇನೆ. ಅವರು ನನ್ನ ವಿರುದ್ಧ ಸೈಬರ್ ಕ್ರೈಂನಲ್ಲಿ ದೂರು ನೀಡುವುದಾಗಿ ತಿಳಿಸಿದ್ದಾರೆ. ಸಿಬಿಐ ತನಿಖೆ ಎದುರಿಸಲು ಸಿದ್ಧ’ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಹಿರಿಯ ಮುಖಂಡ ಹೇಳಿಗೆಹಳ್ಳಿ ತಮ್ಮಣ್ಣಗೌಡ, ತಾ.ಪಂ ಮಾಜಿ ಸದಸ್ಯ ಮಾಡಬಾಳ್ ಜರಾಯರಾಂ, ಎನ್ಇಎಸ್ ಆನಂದ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.