ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ 5ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ವೇದಿಕೆ ಕಾರ್ಯಕ್ರಮಕ್ಕೆ ಮುಂಚೆ ಅಂದು ಬೆಳಿಗ್ಗೆ 9.30ಕ್ಕೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಿಂದ ಅಂಬೇಡ್ಕರ್ ಭವನದವರೆಗೆ ಜಗಜೀವನ್ ರಾಮ್ ಅವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಲಾಗುವುದು. ನಂತರ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಶುರುವಾಗಲಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ರಾಮನಗರ ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್ ಅವರು ಅಧ್ಯಕ್ಷತೆ ವಹಿಸುವರು.

ಸಂಸದ ಡಾ. ಸಿ.ಎನ್. ಮಂಜುನಾಥ್, ಶಾಸಕರಾದ ಎಚ್.ಸಿ. ಬಾಲಕೃಷ್ಣ, ಸಿ.ಪಿ. ಯೋಗೇಶ್ವರ್, ಎನ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್. ರವಿ, ಸುಧಾಮ್ ದಾಸ್, ರಾಮೋಜಿ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ. ರೇವಣ್ಣ, ಜಿಲ್ಲಾಧ್ಯಕ್ಷ ಕೆ. ರಾಜು ಭಾಗವಹಿಸಲಿದ್ದಾರೆ .

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-14-409613615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.