ರಾಮನಗರ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕಾನೂನಿಗೆ ಸಾಂವಿಧಾನಿಕ ತಿದ್ದುಪಡಿ ತರುವುದಕ್ಕೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ, ಜೆಡಿಎಸ್ ಪಕ್ಷದ ವತಿಯಿಂದ ನಗರದ ಐಜೂರು ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿರೋಧ ಪಕ್ಷಗಳ ವಿರುದ್ಧ ಪ್ರತಿಭಟನಾ ಫಲಕ ಪ್ರದರ್ಶಿಸಿ, ಘೋಷಣೆಗಳನ್ನು ಕೂಗಿದರು. ಮೀಸಲಾತಿ ವಿರೋಧಿಸಿರುವ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವು ಮಹಿಳಾ ವಿರೋಧಿ ನೀತಿ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಕೋರ್ ಸಮಿತಿ ಸದಸ್ಯ ಹಾಗೂ ಮಾಜಿ ಶಾಸಕ ಎ. ಮಂಜುನಾಥ್, ‘ಮಹಿಳಾ ಮೀಸಲಾತಿ ವಿರೋಧಿಸಿರುವ ಕಾಂಗ್ರೆಸ್ ಪಕ್ಷವು, ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ನೀಡುವ ವಿಷಯದಲ್ಲಿ ತನ್ನ ಇಬ್ಬಗೆಯ ನೀತಿ ಪ್ರದರ್ಶಿಸಿದೆ. ದೇಶದ ಹೆಣ್ಣು ಮಕ್ಕಳು ಈ ಪಕ್ಷವನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮಹಿಳೆಯರಿಗೆ ಲೋಕಸಭೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ದೃಷ್ಟಿಯಿಂದ ಎನ್ಡಿಎ ಸರ್ಕಾರದ ಪ್ರಯತ್ನಕ್ಕೆ ಕಾಂಗ್ರೆಸ್ ಅಡ್ಡಗಾಲು ಹಾಕಿದೆ. ಆ ಮೂಲಕ ಮಹಿಳೆಯರ ರಾಜಕೀಯ ಸಬಲೀಕರಣದ ದಶಕಗಳ ಕನಸಿನ ಸಾಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ. ಗೋಸುಂಬೆ ಬುದ್ದಿಯ ಕಾಂಗ್ರೆಸ್ ಅನ್ನು ಮಹಿಳೆಯರು ನಂಬಬಾರದು’ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಚ್. ಜಯಮುತ್ತು ಮಾತನಾಡಿ, ‘ಕಾಂಗ್ರೆಸ್ನ ಮಹಿಳಾ ವಿರೋಧಿ ನೀತಿ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಅದರ ಭಾಗವಾಗಿ ರಾಮನಗರದಲ್ಲೂ ಪಕ್ಷದಿಂದ ಪ್ರತಿಭಟನೆ ನಡೆಸಲಾಗಿದೆ. ಪಕ್ಷದ ಜಿಲ್ಲಾ, ತಾಲ್ಲೂಕು ಸೇರಿದಂತೆ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ’ ಎಂದರು.

ಪ್ರತಿಭಟನೆಯಲ್ಲಿ ಸುಡು ಬಿಸಿಲು ಲೆಕ್ಕಿಸದೆ ಹೆಚ್ಚಿನ ಕಾರ್ಯಕರ್ತರು ಸೇರಿದ್ದರು. ಇದರಿಂದಾಗಿ ಐಜೂರು ವೃತ್ತದಲ್ಲಿ ವಾಹನ ಸಂಚಾರಕ್ಕೆ ಕೆಲ ಹೊತ್ತು ತೊಂದರೆಯಾಯಿತು. ಪಕ್ಷದ ರಾಮನಗರ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಕನಕಪುರ ತಾಲ್ಲೂಕು ಅಧ್ಯಕ್ಷ ಚಿಕ್ಕಪ್ಪ ನಾಗರಾಜ್, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ಮೂಗೇಗೌಡ, ಜಯಕುಮಾರ್, ಯೋಗೇಶ್, ಕೃಷ್ಣೇಗೌಡ, ನರೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-14-541955735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.