ಬಿಡದಿ: ಪಟ್ಟಣದಲ್ಲಿರುವ ಜ್ಞಾನ ವಿಕಾಸ್ ವಿದ್ಯಾಸಂಘದ ಅಂಗಸಂಸ್ಥೆಯಾದ ಜ್ಞಾನ ವಿಕಾಸ್ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಮಂಗಳವಾರ ಬೃಹತ್ ಉದ್ಯೋಗ ಮೇಳ ನಡೆಯಿತು. ಮೇಳದಲ್ಲಿ ಸುಮಾರು 35ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದರು. ಜಿಲ್ಲೆ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಸಾವಿರಕ್ಕೂ ಹೆಚ್ಚು ಮಂದಿ ಮೇಳದಲ್ಲಿ ಭಾಗವಹಿಸಿ ವಿವಿಧ ಹುದ್ದೆಗಳಿಗೆ ಆಯ್ಕೆಯಾದರು.

ಉದ್ಯೋಗಕ್ಕೆ ಆಯ್ಕೆಯಾದವರಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದ ಜ್ಞಾನ ವಿಕಾಸ್ ವಿದ್ಯಾಸಂಘದ ಅಧ್ಯಕ್ಷ ಸಿ.ಎಂ. ಲಿಂಗಪ್ಪ ಅವರು, ‘ನಮ್ಮ ಸಂಸ್ಥೆಯ ಆಹ್ವಾನಕ್ಕೆ ಸ್ಪಂದಿಸಿ ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ. ಮೇಳದಲ್ಲಿ ಭಾಗವಹಿಸಿದ ಬಹುತೇಕ ಗ್ರಾಮೀಣ ಭಾಗದ ಯುವಜನರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗಾವಕಾಶ ಕಲ್ಪಿಸಿ, ಅವರ ಬದುಕಿಗೆ ಬೆಳಕಾಗಿವೆ’ ಎಂದರು.

‘ವಿದ್ಯಾರ್ಥಿಗಳು ಓದುವಾಗಲೇ ತಮ್ಮ ಮುಂದಿನ ಗುರಿ, ಉದ್ಯೋಗ ಸೇರಿದಂತೆ ಭವಿಷ್ಯದ ಯೋಜನೆಗಳ ಕುರಿತು ರೂಪುರೇಷೆ ಹಾಕಿಕೊಳ್ಳಬೇಕು. ಆಗ ಮಾತ್ರ ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸಲು ಸಹಾಯವಾಗುತ್ತವೆ’ ಎಂದು ಸಲಹೆ ನೀಡಿದರು.

ವಿದ್ಯಾಸಂಘದ ಖಜಾಂಚಿ ಎಸ್. ಗಂಗಾಧರ್, ನಿರ್ದೇಶಕ ಸತೀಶ್ ಚಂದ್ರ, ಕಾಲೇಜಿನ ಪ್ರಾಂಶುಪಾಲ ಡಾ. ಸೀತಾ ಗಿರೀಶ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ಆಫೀಸರ್ ಕಿರಣ್ ವಿ. ಕಡಿವಾಳ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-14-1772044769

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.