ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ | ಬಿಎಸ್‌ಪಿಯಿಂದ ಚಿಕ್ಕಹಾಗಡೆ ಉಚ್ಚಾಟನೆ

ನಾಮಪತ್ರ ವಾಪಸ್‌ ಪಡೆದ ಅಭ್ಯರ್ಥಿ
Published 11 ಏಪ್ರಿಲ್ 2024, 7:39 IST
Last Updated 11 ಏಪ್ರಿಲ್ 2024, 7:39 IST
ಅಕ್ಷರ ಗಾತ್ರ

ಕನಕಪುರ: ನಾಮಪತ್ರ ವಾಪಸ್‌ ಪಡೆದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಚಿನ್ನಪ್ಪ ವೈ.ಚಿಕ್ಕಹಾಗಡೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷ ಅವರನ್ನು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ, ಅವರು ಪಕ್ಷಕ್ಕೆ ದ್ರೋಹ ಮಾಡಿ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕಾಂಗ್ರೆಸ್‌ ಆಮಿಷಕ್ಕೆ ಒಳಗಾಗಿ ನಾಮಪತ್ರ ವಾಪಸ್‌ ಪಡೆದಿದ್ದಾರೆ. ನಂಬಿಕೆಗೆ ದ್ರೋಹವೆಸಗಿದ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಅನ್ನದಾನಪ್ಪತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿ ಇಲ್ಲ. ಪಕ್ಷವು ಇಲ್ಲಿ ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಯಾವ ಪಕ್ಷಕ್ಕೂ ಬೆಂಬಲ ನೀಡುತ್ತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT