ಕನಕಪುರ: ಮಕ್ಕಳ ದಾಖಲಾತಿ ಇಲ್ಲವೆಂಬ ನೆಪ ನೀಡಿ ಸರ್ಕಾರಿ ಶಾಲೆಯನ್ನು ಮುಚ್ಚಿದ್ದ ಶಿಕ್ಷಣ ಇಲಾಖೆಯು ಪೋಷಕರು ಮತ್ತು ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಶಾಲೆಯನ್ನು ಪುನರಾರಂಭಿಸಿದೆ.

ತಾಲ್ಲೂಕಿನ ಟಿ.ಬೇಕುಪ್ಪೆ ಗ್ರಾಮದಲ್ಲಿ ಮುಚ್ಚಿದ್ದ ಸರ್ಕಾರಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಅಧಿಕಾರಿಗಳು ಖುದ್ದು ಭೇಟಿ ನೀಡಿ ಶಾಲೆ ಬೀಗ ತೆಗೆಸಿ ಪುನರಾರಂಭ ಮಾಡಿದ್ದಾರೆ.

ಶಿಕ್ಷಣ ಇಲಾಖೆ ಸಿಆರ್ಪಿ ಮತ್ತು ಶಾಲೆ ಶಿಕ್ಷಕಿ ಶಾಲೆಯಲ್ಲಿ ಶೂನ್ಯ ದಾಖಲಾತಿ ಇದ್ದು ಗ್ರಾಮಸ್ಥರು ಒಪ್ಪಿಗೆ ಮೇರೆಗೆ ಶಾಲೆ ಮುಚ್ಚಲಾಗುತ್ತಿದೆ ಎಂದು ವರದಿ ನೀಡಿದ್ದರು.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಮೂರು ಮಕ್ಕಳು ದಾಖಲಾಗಿ ಶಾಲೆಗೆ ಬರುತ್ತಿದ್ದರು. ಅದನ್ನು ಮುಚ್ಚಿಟ್ಟು ಸುಳ್ಳು ವರದಿ ನೀಡಿದ್ದಾರೆ ಎಂದು ಪೋಷಕರು ಮತ್ತು ಗ್ರಾಮಸ್ಥರು ದೂರಿದ್ದರು. ಬಿಇಒ ಕಚೇರಿಗೆ ಮುತ್ತಿಗೆ ಹಾಕಿ ಶಾಲೆ ಪುನರಾರಂಭಿಸುವಂತೆ ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.