ಕನಕಪುರ: ಬೆಂಗಳೂರಿನಿಂದ ಶನಿವಾರ ರಾತ್ರಿ ಬೈಕ್ನಲ್ಲಿ ಕನಕಪುರಕ್ಕೆ ಬರುವಾಗ ಕುಮಾರಸ್ವಾಮಿ ಲೇಔಟ್ನಲ್ಲಿ ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಕನಕಪುರದ ಉದಯ್ ಗೌಡ (27) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ನಗರದ ಎಸ್ ಕರಿಯಪ್ಪ ರಸ್ತೆಯ ನಿವಾಸಿ, ಉದಯ್ ಎಲೆಕ್ಟ್ರಿಕಲ್ ಮಾಲೀಕ ನಾಗೇಂದ್ರ ಪುತ್ರ. ಅವರಿಗೆ ತಾಯಿ ಮತ್ತು ಒಬ್ಬ ಸಹೋದರ ಇದ್ದಾರೆ. ಬಿ.ಇ ಪದವೀಧರರಾಗಿದ್ದು, ಬೆಂಗಳೂರಿನಲ್ಲಿ ಇಂಟೀರಿಯರ್ ಡೆಕೋರೇಷನ್ ಮತ್ತು ಬಿಲ್ಡಿಂಗ್ ಕನ್ಸ್ಟ್ರಕ್ಷನ್ ವಹಿವಾಟು ಮಾಡುತ್ತಿದ್ದರು.

ಶನಿವಾರ ರಾತ್ರಿ ಕೆಲಸ ಮುಗಿಸಿದ ನಂತರ ಸ್ನೇಹಿತರ ಜೊತೆ ಊಟ ಮಾಡಿಕೊಂಡು ಬೈಕ್ನಲ್ಲಿ ಕನಕಪುರಕ್ಕೆ ಬರುತ್ತಿದ್ದಾಗ ಕುಮಾರಸ್ವಾಮಿ ಲೇಔಟ್ ನಲ್ಲಿ ರಸ್ತೆಯಲ್ಲಿನ ಗುಂಡಿಗೆ ಸ್ಕೂಟರ್ ಬಿದ್ದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಕುಮಾರಸ್ವಾಮಿ ಲೇಔಟ್ ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ವೈದ್ಯರ ಮನವಿ ಮೇರೆಗೆ ಪೋಷಕರು ಉದಯ್ ಗೌಡ ಅವರ ಕಣ್ಣುಗಳನ್ನು ದಾನ ಮಾಡಿದ್ದಾರೆ.ಬನ್ನಿ ಮುಕ್ಕೋಡ್ಲು ಗ್ರಾಮದಲ್ಲಿ ಮಂಗಳವಾರ ಅಂತ್ಯಸಂಸ್ಕಾರ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-14-2136213927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.