ಕನಕಪುರ: ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆ ಗ್ರಾಮಗಳಲ್ಲಿ ಸಂಸದ ಡಾ.ಸಿ.ಎನ್ ಮಂಜುನಾಥ್ ಅವರ ನಿಧಿಯಿಂದ ಕೊಳವೆ ಬಾವಿ ಕೊರೆಸಲಾಗುತ್ತಿದೆ.

ತಾಲ್ಲೂಕಿನ 8 ಗ್ರಾಮಗಳಲ್ಲಿ ನೀರಿನ ಅಭಾವ ಇರುವುದನ್ನು ಗುರುತಿಸಿ ಕೊಳವೆಬಾವಿ ಕೊರಿಸುತ್ತಿದ್ದು, ಮೊದಲಿಗೆ ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆ ಮರದೊಡ್ಡಿ ಮತ್ತು ಬೇವುದೊಡ್ಡಿ ಗ್ರಾಮದಲ್ಲಿ ಭಾನುವಾರ ಮತ್ತು ಸೋಮವಾರ ಕೊರೆಸಲಾಗಿದೆ.

ಯಂತ್ರಗಳಿಗೆ ಗ್ರಾಮದ ಜನರು ಪೂಜೆ ಮಾಡಿದರು. ಎರಡು ಗ್ರಾಮಗಳಲ್ಲೂ ಕೊಳವೆಬಾವಿ ಕೊರೆದಿದ್ದು ಉತ್ತಮವಾಗಿ ನೀರು ದೊರೆತಿದೆ.

ಚಿಕ್ಕ ಮುದುವಾಡಿ ಪಂಚಾಯಿತಿ ವ್ಯಾಪ್ತಿಯ ಚಿಕ್ಕೇನಹಳ್ಳಿ, ಚಿಕ್ಕಮುದುವಾಡಿ, ಸೋಮೆದ್ಯಾಪನ ಹಳ್ಳಿ ಗ್ರಾಮ ಪಂಚಾಯಿತಿಯ ಮುರುಡಿ ಹೊಸಳ್ಳಿ, ಉಯ್ಯಂಬಳ್ಳಿ ಪಂಚಾಯಿತಿ ವ್ಯಾಪ್ತಿಯ ಚೀಲಂದವಾಡಿ, ತಮಟೆ ಪುಟ್ಟಣ್ಣ ದೊಡ್ಡಿ, ದೊಡ್ಡಾಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ನಾಯಕನಹಳ್ಳಿ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಸುತ್ತಿರುವುದಾಗಿ ದಿಶಾ ಕಮಿಟಿ ಸದಸ್ಯೆ ಶೋಭಾ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-14-1864166328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.