ರಾಮನಗರ: ‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯ ಯಾವೊಬ್ಬ ಫಲಾನುಭವಿಯೂ ಹೊರಗುಳಿಯದಂತೆ ಎಚ್ಚರ ವಹಿಸಬೇಕು. ಅರ್ಹರಿರುವ ಪ್ರತಿಯೊಬ್ಬ ಫಲಾನುಭವಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಅಗತ್ಯ ಕ್ರಮ ವಹಿಸಬೇಕು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿ ದಾಖಲೆಗಳನ್ನು ಆನ್ಲೈನ್ನಲ್ಲಿ ನಮೂದಿಸುವಾಗ ಹೆಸರು, ಆಧಾರ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ತಪ್ಪಾಗಿ ನಮೂದಾಗುವ ಸಾಧ್ಯತೆ ಬಗ್ಗೆ ಎಚ್ಚರ ವಹಿಸಬೇಕು’ ಎಂದರು.

‘ದಾಖಲೆ ನಮೂದಿಸುವಾಗ ಸಣ್ಣ ತಪ್ಪಾದರೂ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವುದಿಲ್ಲ. ಈ ವಿಷಯದಲ್ಲಿ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

‘ಚನ್ನಪಟ್ಟಣ, ರಾಮನಗರದಿಂದ ಬೆಂಗಳೂರಿಗೆ ಸಾರ್ವಜನಿಕರು ಪ್ರಯಾಣಿಸಲು ಪ್ರತಿ ಭಾನುವಾರ ಸಂಜೆ 4 ಗಂಟೆಯಿಂದ 6ರವರೆಗೆ ಹಾಗೂ ಸೋಮವಾರ ಬೆಳಿಗ್ಗೆ 11 ಗಂಟೆಯವರೆಗೆ ಹೆಚ್ಚುವರಿ ಬಸ್ಗಳನ್ನು ನಿಯೋಜಿಸಬೇಕು. ಈ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ’ ಎಂದು ಹೇಳಿದರು.

‘ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಬಸ್ಗಳನ್ನು ಓಡಿಸಬೇಕುಬೇಸಿಗೆ ರಜೆ ಕಳೆದು ಮುಂದಿನ ತಿಂಗಳಲ್ಲಿ ಶಾಲಾ– ಕಾಲೇಜುಗಳು ಆರಂಭಗೊಳ್ಳಲಿವೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅವಶ್ಯವಿರುವ ಗ್ರಾಮಗಳಿಗೆ ಬಸ್ ಸೌಕರ್ಯ ಕಲ್ಪಿಸಬೇಕು’ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಮಾಹಿತಿ ನೀಡಿ: ‘ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಐದು ಇಲಾಖೆಗಳ ಅಧಿಕಾರಿಗಳು ಯೋಜನೆಗಳ ಪ್ರಗತಿ ಪರಿಶೀಲನೆಗೆ ತಾಲ್ಲೂಕುವಾರು ಮಾಹಿತಿಯನ್ನು ಮುಂದಿನ ಸಭೆಗೆ ನೀಡಬೇಕು. ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಎಲ್ಲಾ ಅಧಿಕಾರಿಗಳು ಹಾಗೂ ಇಲಾಖೆಗಳು ಶ್ರಮಿಸಬೇಕು’ ಎಂದು ತಿಳಿಸಿದರು.

ಸಮಿತಿ ಉಪಾಧ್ಯಕ್ಷರಾದ ಮಹದೇಶ್, ಎಸ್.ಸಿ. ಶೇಖರ್, ಸಿದ್ದೇಗೌಡ, ಸದಸ್ಯರು ಹಾಗೂ ರಾಮನಗರ ತಾಲ್ಲೂಕು ಅಧ್ಯಕ್ಷ ವಿ.ಎಚ್. ರಾಜು, ಮಾಗಡಿ ತಾಲ್ಲೂಕು ಅಧ್ಯಕ್ಷ ಶಿವಣ್ಣ, ಜಿಲ್ಲಾ ಸದಸ್ಯರಾದ ಶಿವಮಾದಯ್ಯ, ಎಂ. ಮಹದೇವ್, ಕಾಳಮ್ಮ, ವನಜಾ ಎಸ್.ಜಿ, ಶೋಭಾ, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-14-830251398

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.