ಕುದೂರು (ಮಾಗಡಿ): ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ವೀರಾಪುರ ಬಳಿ ಬಳಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಜಮೀನು ಅಳತೆ ಮಾಡಲು ತೆರಳಿದ್ದ ಗ್ರಾಮ ಲೆಕ್ಕಿಗ ಮತ್ತು ಸರ್ವೆ ಸಿಬ್ಬಂದಿ ಮೇಲೆ ಜಮೀನು ಮಾಲೀಕರು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಲ್ಲಿ ಗ್ರಾಮ ಲೆಕ್ಕಿಗ ಹೊನ್ನಪ್ಪ ಹಾಗೂ ಸರ್ವೆ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ವೀರಾಪುರ ಜಮೀನೊಂದರ ನಕಾಶೆ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಕೆಯಾಗಿತ್ತು. ಜಾಗ ಪರಿಶೀಲನೆ ಹಾಗೂ ಅಳತೆಗೆ ಗ್ರಾಮ ಲೆಕ್ಕಿಗ ಹೊನ್ನಪ್ಪ ಮತ್ತು ಸರ್ವೆ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು.

ಸಿಬ್ಬಂದಿ ಅಳತೆ ಮಾಡುವಾಗ ರಸ್ತೆ ಪಕ್ಕದ ಜಮೀನಿನ ಮಾಲೀಕರಾದ ಚಿಕ್ಕಯ್ಯನಪಾಳ್ಯದ ಜಯಮ್ಮ, ಅವರ ಪುತ್ರ ಮೋಹನ್ ಹಾಗೂ ಸಂಬಂಧಿಕರು ಗಲಾಟೆ ಆರಂಭಿಸಿದ್ದಾರೆ. ‘ಯಾವುದೇ ಪೂರ್ವ ತಿಳಿವಳಿಕೆ ಪತ್ರ (ನೋಟಿಸ್) ನೀಡಿಲ್ಲ’ ಎಂದು ಸಿಬ್ಬಂದಿ ಮೇಲೆ ಮುಗಿಬಿದ್ದಿದ್ದಾರೆ. ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.

ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡ ಗ್ರಾಮ ಲೆಕ್ಕಿಗ ಹೊನ್ನಪ್ಪ ಹಾಗೂ ಸರ್ವೆ ಸಿಬ್ಬಂದಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕುದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-14-2127377048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.