ಬಿಡದಿ: ಕುದೂರು ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ನಕಲಿ ಚಿನ್ನದ ಹಗರಣ ಬಯಲಿಗೆ ತಂದಿದ್ದೇ ಶಾಸಕ ಬಾಲಕೃಷ್ಣ ಅವರ ಸಹೋದರ ಅಶೋಕ್ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ವೈ.ಮಂಜು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕುದೂರು ಬಿಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸದ್ದು ಮಾಡುತ್ತಿದೆ. ಇದರಲ್ಲಿ ಶಾಸಕ ಬಾಲಕೃಷ್ಣ ಕುಟುಂಬದವರು ಭಾಗಿಯಾಗಿದ್ದಾರೆ ಎಂದು ಮಾಜಿ ಶಾಸಕ ಎ. ಮಂಜುನಾಥ್ ಆರೋಪಿಸುತ್ತಿದ್ದಾರೆ. ಈ ಆರೋಪದಲ್ಲಿ ಹುರುಳಿಲ್ಲ ಎಂದರು.

ಚಿನ್ನಾಭರಣಗಳ ಮೌಲ್ಯಮಾಪನ ಮಾಡಲು ಒಬ್ಬರನ್ನು ನೇಮಕ ಮಾಡಿಕೊಳ್ಳಬೇಕಿದೆ. ಕುದೂರು ಶಾಖೆಯಲ್ಲೂ ಒಬ್ಬರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆತ ನಕಲಿ ಚಿನ್ನದ ಹಗರಣದಲ್ಲಿ ಭಾಗಿಯಾಗಿದ್ದ ಎಂಬುದು ತನಿಖೆ ವೇಳೆ ಬಯಲಾಗಿದೆ ಎಂದರು.

ಮಾಜಿ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ಆರೋಗ್ಯಕರ ಚರ್ಚೆ ಮಾಡಲಿ. ಇಲ್ಲ ಸಲ್ಲದ ಆರೋಪ ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಚಂದ್ರಶೇಖರ್, ಜೀವನ್ ಬಾಬು, ಅಬ್ಬನಕುಪ್ಪೆ ರಮೇಶ್, ಮಹೇಶ್, ದೊಡ್ಡ ರೇವಯ್ಯ, ಮಧುಕುಮಾರ್, ಸಂತೋಷ್, ಬಾಲಕೃಷ್ಣ, ಶೋಭಾ, ಅನ್ನಪೂರ್ಣೇಶ್ವರಿ, ಯೋಗಾನಂದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-14-431991072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.