ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುದೂರು | ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಕಲರವ
Published : 23 ಸೆಪ್ಟೆಂಬರ್ 2024, 5:51 IST
Last Updated : 23 ಸೆಪ್ಟೆಂಬರ್ 2024, 5:51 IST
ಫಾಲೋ ಮಾಡಿ
Comments

ಕುದೂರು: ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಅನಾವರಣ ಮಾಡುವ ಸೂಕ್ತ ವೇದಿಕೆ ಎಂದು ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಹೇಳಿದರು.

ಸೋಲೂರಿನ ಬಸವೇಶ್ವರ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಪ್ರೌಢಶಾಲೆ ವಿಭಾಗದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದವರೆಗೆ ಸ್ಪರ್ಧೆ ಇರುವುದರಿಂದ ಶಾಲೆ ಶಿಕ್ಷಕರು ಉತ್ತಮ ತರಬೇತಿ ನೀಡಿ ಸಜ್ಜುಗೊಳಿಸಬೇಕು ಎಂದು ತಿಳಿಸಿದರು.

ಕ್ಲಸ್ಟರ್ ವ್ಯಾಪ್ತಿಯ 13 ಪ್ರೌಢಶಾಲೆಗಳಿಂದ 250ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಧಾರ್ಮಿಕ ಪಠಣ, ದೇಶಭಕ್ತಿ ಗೀತೆ, ಅಭಿನಯ ಗೀತೆ, ಚಿತ್ರಕಲೆ, ಕಂಠಪಾಠ, ಮಿಮಿಕ್ರಿ, ಛದ್ಮವೇಷ, ಕ್ಲೇ ಮಾಡಲಿಂಗ್, ಕೋಲಾಟ, ಜಾನಪದ ನೃತ್ಯ, ಆಶುಭಾಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಇಸಿಒ ಗಂಗಾಧರ್, ಸಿ.ಆರ್.ಪಿ ಜಗದೀಶ್, ಹೋಬಳಿಯ ಹಲವು ಶಾಲೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಸೋಲೂರಿನ ಬಸವೇಶ್ವರ ಪ್ರೌಢಶಾಲೆಯಲ್ಲಿ ಈಚೆಗೆ ಪ್ರೌಢಶಾಲೆ ವಿಭಾಗದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು
ಸೋಲೂರಿನ ಬಸವೇಶ್ವರ ಪ್ರೌಢಶಾಲೆಯಲ್ಲಿ ಈಚೆಗೆ ಪ್ರೌಢಶಾಲೆ ವಿಭಾಗದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT