ಚನ್ನಪಟ್ಟಣ: ವಿಶ್ವ ಮಾನವ ಕುವೆಂಪು ಅವರ ಸಾಹಿತ್ಯವನ್ನು ಇಂದಿನ ಮಕ್ಕಳು ಅಭ್ಯಾಸ ಮಾಡುವುದರ ಮೂಲಕ ವಿಶ್ವಮಾನವ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಕಿವಿಮಾತು ಹೇಳಿದರು.

ನಗರದ ಗಾಂಧಿ ಭವನ ಬಳಿ ನೇಗಿಲಯೋಗಿ ಸಾಮಾಜಿಕ ಟ್ರಸ್ಟ್, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಇಂಡಿಯನ್ ಆಕ್ಸ್ ಫರ್ಡ್ ಶಾಲೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಜನ್ಮದಿನಾಚರಣೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಕುವೆಂಪು ಅವರು ಕನ್ನಡ ಸಾಹಿತ್ಯದ ಮೇಲ್ಪಂಕ್ತಿ ಕವಿ. ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ವಿಚಾರ ಪ್ರೇರಕ ಕೃತಿಗಳನ್ನು ಓದಿ, ಅರ್ಥೈಸಿಕೊಂಡು ಅದರಲ್ಲಿನ ಅಂಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ.ನಾಗೇಶ್, ನೇಗಿಲಯೋಗಿ ಸೇವಾ ಟ್ರಸ್ಟ್ ಜಿಲ್ಲಾಧ್ಯಕ್ಷ ಪಟೇಲ್ ರಾಜು, ತಾಲ್ಲೂಕು ಅಧ್ಯಕ್ಷ ಧರಣೀಶ್ ರಾಂಪುರ, ಮಹಿಳಾ ಘಟಕದ ಅಧ್ಯಕ್ಷೆ ರಮ್ಯಾ, ಕಸಾಪ ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಶ್ರೀನಿವಾಸ್ ರಾಂಪುರ, ದಿನೇಶ್, ಮಾಜಿ ಅಧ್ಯಕ್ಷ ಚೆಲುವರಾಜು, ವಿದ್ಯಾಸಂಸ್ಥೆ ನಿರ್ದೇಶಕಿ ಮಾಲಿನಿ, ಮುಖಂಡ ಆನಂದಸ್ವಾಮಿ ಇತರರು ಭಾಗವಹಿಸಿದ್ದರು.

ವಿಶೇಷ ರೇಷ್ಮೆ ವಲಯ ಘೋಷಣೆಗೆ ಒತ್ತಾಯ ರೇಷ್ಮೆ ಬೆಳೆಯುವ ರೈತರಿಗೆ ವಿಶೇಷ ಸವಲತ್ತು ದೊರಕಿಸಿಕೊಡುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ವಿಶೇಷ ರೇಷ್ಮೆ ವಲಯ ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿರುವುದಾಗಿ ಸಂಸದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು. ಜಿಲ್ಲೆಯಲ್ಲಿ 1ಲಕ್ಷ 18 ಹೆಕ್ಟೇರ್ ನಲ್ಲಿ ಹಿಪ್ಪುನೇರಳೆ ಕೃಷಿ ಮಾಡಲಾಗುತ್ತಿದೆ. ಹಾಗಾಗಿ ವಿಶೇಷ ಆರ್ಥಿಕ ವಲಯ ಸ್ಥಾಪನೆ ಮಾಡಿ ಸವಲತ್ತು ಒದಗಿಸುವ ರೀತಿ ವಿಶೇಷ ರೇಷ್ಮೆ ವಲಯ ಸ್ಥಾಪನೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಜವಳಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದರು. ರೈತರ ಜಮೀನು ಸ್ವಾಧೀನಪಡಿಸುವ ಸಂದರ್ಭದಲ್ಲಿ ಆವಶ್ಯ ಇರುವಷ್ಟು ಜಮೀನು ಮಾತ್ರ ಸ್ವಾಧೀನ ಮಾಡಬೇಕು. ಅನವಶ್ಯಕವಾಗಿ ರೈತರ ಜಮೀನು ಸ್ವಾಧೀನ ಮಾಡುವುದರಿಂದ ಕೃಷಿಗೆ ಪೆಟ್ಟು ನೀಡಿದಂತಾಗುತ್ತದೆ. ಇದನ್ನು ಆಡಳಿತಗಳು ಮನಗಾಣಬೇಕು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸೈಟ್ ಅಪಾರ್ಟ್ ಮೆಂಟ್ ನಿರ್ಮಾಣದಿಂದ ಅಭಿವೃದ್ಧಿ ಆಗುವುದಿಲ್ಲ ಎಂದರು. ಚನ್ನಪಟ್ಟಣದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಐಸಿ ಮಿಲ್ ಸದ್ಯ ಮುಚ್ಚಿದೆ. ಅದನ್ನು ಪುನರಾರಂಭ ಮಾಡಿದರೆ ರೇಷ್ಮೆ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ. ಜತೆಗೆ ಯುವ ಜನರಿಗೂ ಉದ್ಯೋಗ ಸಿಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.