ರಾಮನಗರ: ‘ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕಾರ್ಮಿಕರು ಅವುಗಳ ಪ್ರಯೋಜನ ಪಡೆಯಬೇಕು. ಅಸಂಘಟಿತರು ಸಂಘಟಿತರಾಗಿ ಸಬಲರಾಗಬೇಕು’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಸಲಹೆ ನೀಡಿದರು.

ಕಾರ್ಮಿಕ ಇಲಾಖೆ ಮತ್ತು ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ, ನಗರದ ಅಲ್ ಕರೀಂ ಫಂಕ್ಷನ್ ಹಾಲ್ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಸಂಘಟಿತ ಕಾರ್ಮಿಕ ಮತ್ತು ರಾಜ್ಯ ಮೋಟಾರು ಸಾರಿಗೆ ಹಾಗೂ ಇತರ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಡಿ ಫಲಾನುಭವಿಗಳ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಶ್ರಮಜೀವಿಗಳಾದ ಅಸಂಘಟಿತ ಕಾರ್ಮಿಕರು ನಮ್ಮ ಸರ್ಕಾರದ ಬೆನ್ನೆಲುಬಾಗಿದ್ದು, ಅವರ ಹಿತ ಕಾಯಲು ನಾವು ಬದ್ದರಾಗಿದ್ದೇವೆ. ಅವರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಬಾರದು’ ಎಂದರು.

‘ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ ಪ್ರಾರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ಮಾತ್ರ ನೊಂದಾಯಿಸಲಾಗುತ್ತಿತ್ತು. ಸರ್ಕಾರ ವಿಶೇಷವಾಗಿ ಮುತುವರ್ಜಿ ವಹಿಸಿ ಅದನ್ನು ಇತರೆ ವರ್ಗಗಳಿಗೂ ವಿಸ್ತರಿಸಿದೆ’ ಎಂದು ತಿಳಿಸಿದರು.

‘ಇಲಾಖೆಯಿಂದ ಅಸಂಘಟಿತ ಕಾರ್ಮಿಕರ ಕಸುಬಿಗೆ ಅನುಗುಣವಾಗಿ ಕಿಟ್ಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ ಅವರ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ರಾಮನಗರದಲ್ಲಿಯೂ ಶ್ರಮಿಕ ವಸತಿ ಶಾಲೆ ತೆರೆಯಲಾಗುತ್ತಿದೆ’ ಎಂದು ಹೇಳಿದರು.

‘ರಾಮನಗರದಲ್ಲಿ ಅರ್ಹ ಬಡವರಿಗೆ 10 ಸಾವಿರ ನಿವೇಶನಗಳನ್ನು ಹಂಚಲು ನಿರ್ಧರಿಸಲಾಗಿದೆ. ಇದಕ್ಕಾಗಿ 13 ಸಾವಿರ ಅರ್ಜಿಗಳು ಬಂದಿವೆ. ಶಿಡ್ಲಕಲ್ಲು ಬಳಿ 888 ನಿವೇಶನಗಳ ಬಡಾವಣೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಆಶ್ರಯ ಸಮಿತಿ ಆಯ್ಕೆ ಮಾಡಿದ ಅರ್ಹ ಬಡವರಿಗೆ ನಿವೇಶನ ಒದಗಿಸುತ್ತೇವೆ’ ಎಂದು ಭರವಸೆ ನೀಡಿದರು.

‘ನನ್ನ ಅಧಿಕಾರದ ಅವಧಿಯಲ್ಲಿ ಜನಪರ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಜಿಲ್ಲೆಯ ನಿರುದ್ಯೋಗಿ ಯುವಜನರಿಗೆ ಉದ್ಯೋಗ ಮೇಳದ ಮೂಲಕ ಉದ್ಯೋಗಾವಕಾಶ ಕಲ್ಪಿಸಿದ್ದೇವೆ. ಅಲ್ಪಸಂಖ್ಯಾತರ ಸಮುದಾಯದ ಬಡ ಕುಟುಂಬಗಳ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ನೆರವೇರಿಸಲಾಗಿದೆ. ಮುಂದಿನ ದಿನಗಲ್ಲಿ ಮತ್ತೆ 150 ಜೋಡಿಗಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು’ ಎಂದು ಹೇಳಿದರು.

ಕಿಟ್, ಬಾಂಡ್ ವಿತರಣೆ: ಕಾರ್ಯಕ್ರಮದಲ್ಲಿ 50 ಕಟ್ಟಡ ಕಾರ್ಮಿಕರು ಮತ್ತು 30 ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್, 30 ಕಟ್ಟಡ ಕಾರ್ಮಿಕರಿಗೆ ಕಿಟ್ಗಳು ಹಾಗೂ ಐವರು ಕಟ್ಟಡ ಕಾರ್ಮಿಕರಿಗೆ ಮದುವೆ ಧನಸಹಾಯ ಬಾಂಡ್ಗಳನ್ನು ಶಾಸಕ ಹುಸೇನ್ ವಿತರಿಸಿದರು.

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಮಾಜಿ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ರಾಮನಗರದ ಕಾರ್ಮಿಕ ನಿರೀಕ್ಷಕ ಪ್ರದೀಪ್, ಜೈ ಭಾರತ್ ಪವರ್ ಲೂಮ್ ವೀವರ್ಸ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಟಿ. ರಂಗರಾಜು, ಕಾರ್ಯದರ್ಶಿ ಮುಸ್ತಾಕ್ ಪಾಷ, ಮುಖಂಡರಾದ ಮತೀನ್ ಪಾಷ, ಗುರುವೇಗೌಡ, ಪ್ರಕಾಶ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-199334824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.