ರಾಮನಗರ: ‘ಶ್ರಮಿಕ ವರ್ಗವಾದ ಕಾರ್ಮಿಕರು ಸಂಘಟಿತರಾದಾಗ ಮಾತ್ರ ನ್ಯಾಯಯುತವಾದ ಹಕ್ಕುಗಳನ್ನು ಪಡೆಯಲು ಸಾಧ್ಯ. ಈ ದೇಶದ ಆರ್ಥಿಕತೆಯ ಚಕ್ರವನ್ನು ಮುನ್ನಡೆಸುವ ಕಾರ್ಮಿಕರು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಸಹ ಅರಿತು ಒಗ್ಗಟ್ಟಾಗಬೇಕು. ’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹೇಳಿದರು.

ನಗರದ ಬಸ್ ನಿಲ್ದಾಣ ಸಮೀಪ ಶುಕ್ರವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಅಸಂಘಟಿತ ವಲಯದ ಕಾರ್ಮಿಕರು ಸಂಘಟಿತರಾಗಬೇಕು. ಸರ್ಕಾರದ ವಿವಿಧ ಸೌಲಭ್ಯ ಪಡೆದುಕೊಳ್ಳಬೇಕು’ ಎಂದರು.

ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ಆಹಾರ ವಿತರಿಸಲಾಯಿತು. ನಗರಸಭೆ ಸದಸ್ಯ ಸೋಮಶೇಖರ್ ಮಣಿ, ನಗರಸಭೆ ಅಧಿಕಾರಿ ನಟರಾಜ್, ಪೌರ ನೌಕರರ ಸಂಘದ ರಾಮನಗರ ಘಟಕದ ಅಧ್ಯಕ್ಷ ದೇವೇಂದ್ರ, ಮುಖಂಡ ದೇವು, ಕಟ್ಟಡ ನಿರ್ಮಾಣ ಕಾರ್ಮಿಕ ಮುಖಂಡರು ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-14-1397997815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.