ರಾಮನಗರ: ‘ನಿವೇಶನ ರಹಿತರಿಗೆ ಸ್ವಂತ ನಿವೇಶನ ಕಲ್ಪಿಸುವ ವಸತಿ ಯೋಜನೆಗಾಗಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 300 ಎಕೆರೆ ಭೂಮಿ ಗುರುತಿಸಲಾಗಿದೆ. ಸದರಿ ಜಾಗವನ್ನು ಬಡಾವಣೆಯಾಗಿ ಅಭಿವೃದ್ಧಿಪಡಿಸುವ ಕೆಲಸಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ವಸತಿ ರಹಿತರನ್ನು ಗುರುತಿಸಿ ಅವರಿಗೆ ಇಲ್ಲಿ ನಿವೇಶನ ವಿತರಿಸಲಾಗುವುದು’ ಎಂದು ಶಾಸಕ ಎಚ್.ಎ. ಇಕ್ಬಾಲ್ಹುಸೇನ್ ಹೇಳಿದರು.

ತಾಲೂಕಿನ ಕೈಲಾಂಚ ಹೋಬಳಿಯ ವಿಭೂತಿಕೆರೆ ಗ್ರಾಮ ಪಂಚಾಯಿತಿ ಕೆಲ ಗ್ರಾಮಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ವಸತಿ ಇಲಾಖೆ ಮೂಲಕ ಬಡಾವಣೆ ಅಭಿವೃದ್ಧಿಪಡಿಸಲು ₹46 ಕೋಟಿ ಹಾಗೂ ವಸತಿ ಯೋಜನೆಗೆ ಅಗತ್ಯವಿರುವ ಜಮೀನು ಖರೀದಿಗೆ ₹40 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ’ ಎಂದರು.

‘ಸುಮಾರು 10 ಸಾವಿರ ವಸತಿ ರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದೆ. ಆ ಮಾತು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ನಗರ ವ್ಯಾಪ್ತಿಯಲ್ಲಿ ನಿವೇಶನಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಲು ವಾರ್ಡ್ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದರು.

‘ದೊಡ್ಡಮಣ್ಣುಗುಡ್ಡೆ ಪ್ರದೇಶದಲ್ಲಿ ರಾಜೀವ್ಗಾಂಧಿ ವಸತಿ ನಿಗಮ ಯೋಜನೆಯಡಿ ನಿರ್ಮಾಣ ಮಾಡಿರುವ ಮನೆಗಳನ್ನು ದುರಸ್ತಿ ಮಾಡಿ, ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಜಿ+2 ಮಾದರಿಯಲ್ಲಿ ಪ್ಲಾಟ್ಗಳನ್ನು ನಿರ್ಮಿಸಲು ಕ್ರಮ ವಹಿಸಲಾಗಿದೆ. ಅದಕ್ಕಾಗಿ ಶಿಡ್ಲುಕಲ್ಲು ಪ್ರದೇಶದಲ್ಲಿ 40 ಎಕರೆ ಜಾಗ ಗುರುತಿಸಲಾಗಿದೆ’ ಎಂದು ತಿಳಿಸಿದರು.

‘ಮಂಚನಬೆಲೆ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳನ್ನು ಹೊಸದಾಗಿ ನಿರ್ಮಿಸಲು ಕಾವೇರಿ ನೀರಾವರಿ ನಿಗಮದಿಂದ ಪ್ರಸ್ತಾವ ಸಲ್ಲಿಸಲಾಗಿತ್ತು. ಆ ಮೇರೆಗೆ, ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ₹70 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಹೊಸ ವಿನ್ಯಾಸದಂತೆ ಎರಡೂ ಬದಿ 32 ಕಿ.ಮೀ. ಉದ್ದದ ನಾಲೆ ನಿರ್ಮಿಸಲಾಗುವುದು. ಇದರಿಂದ ಕಸಬಾ ಮತ್ತು ಕೈಲಾಂಚ ಹೋಬಳಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಹೇಳಿದರು. ಪಂಚಾಯಿತಿಯ 15 ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ. ರಾಜು, ತಾಲ್ಲೂಕು ಅಧ್ಯಕ್ಷ ವಿ.ಎಚ್. ರಾಜು, ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ಕುಮಾರ್, ಮುಖಂಡರಾದ ಭದ್ರಯ್ಯ, ದೇವರದೊಡ್ಡಿ ಚಂದ್ರಗಿರಿ, ಪಾರ್ಥ, ಶಿವಲಿಂಗಪ್ರಸಾದ್, ಎಂ. ಮಹೇಶ್, ಉಮೇಶ್, ಸಿದ್ದೇಗೌಡ, ಹರಳಪ್ಪ, ಚಂದ್ರು, ಉಮೇಶ್, ಗೋವಿಂದರಾಜು, ಬೈರೇಗೌಡ, ಬಸವರಾಜು, ಚಂದ್ರಪ್ಪ, ಅಂಕಪ್ಪ, ರೇವಣ್ಣ, ರಂಗಸ್ವಾಮಿ, ವೆಂಕಟಪ್ಪ ಗುರುವೇಗೌಡ, ರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-14-719778044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.