ರಾಮನಗರ: ಹುಟ್ಟುತ್ತಲೇ ಯಾರೂ ಅಪರಾಧಿಗಳಲ್ಲ. ಯಾವುದೋ ಕೆಟ್ಟ ಸಮಯ, ಸಂದರ್ಭದಲ್ಲಿ ಮನುಷ್ಯ ದುಡುಕಿ ತಪ್ಪು ಮಾಡುತ್ತಾನೆ. ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿಕೊಂಡು ನಡೆಯಬೇಕು. ಆಗಲೇ ಬದುಕು ಪರಿಪೂರ್ಣವಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಚ್. ಅಣ್ಣಯ್ಯನವರ ಕಿವಿಮಾತು ಹೇಳಿದರು.

ನಗರದ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರಾಗೃಹದ ವತಿಯಿಂದ ಕೈದಿಗಳಿಗಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರಾಗೃಹಗಳು ಪಾಪದ ಕೇಂದ್ರಗಳಲ್ಲ. ಬದಲಿಗೆ, ಪುನರ್ವಸತಿ ಕೇಂದ್ರಗಳು. ತಪ್ಪು ಮಾಡಿ ಇಲ್ಲಿಗೆ ಬಂದವರು, ಬಿಡುಗಡೆಯಾಗಿ ಹೋಗುವಾಗ ಹೊಸ ಮನುಷ್ಯರಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಬೇಟೆಗಾರನಾಗಿದ್ದ ವಾಲ್ಮೀಕಿ ಬದಲಾಗಿ ರಾಮಾಯಣದಂತಹ ಮಹಾಕಾವ್ಯ ರಚಿಸಿದರು. ಮನುಷ್ಯ ಮನಸ್ಸು ಮಾಡಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಅದಕ್ಕೆ ಬೇಕಿರುವುದು ಬದಲಾವಣೆಯ ಇಚ್ಛಾಶಕ್ತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತ ಪಿ.ಆರ್. ಅಭಿಪ್ರಾಯಪಟ್ಟರು.

ಕೈದಿಗಳು ತಮ್ಮ ಬದುಕಿನಲ್ಲಿ ಆಗಿರುವ ತಪ್ಪನ್ನು ಸರಿಪಡಿಸಿಕೊಂಡು, ಮುಂದೆಂದೂ ತಪ್ಪಾಗದಂತೆ ಬದುಕುವತ್ತ ಮನಸ್ಸು ಮಾಡಬೇಕು. ಪೂರಕವಾಗಿ ಜೈಲಿನಲ್ಲಿ ತಮ್ಮ ನಡೆ ಮತ್ತು ನುಡಿ ಉತ್ತಮವಾಗಿರಬೇಕು. ಆ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಸಿಗುವ ಕಾನೂನು ನೆರವು ಪಡೆಯಬೇಕು ಎಂದು ಸಲಹೆ ನೀಡಿದರು.

ಕಾರಾಗೃಹವು ಮನ ಪರಿವರ್ತನೆಯ ಕೇಂದ್ರವಾಗಿದೆ. ಇಲ್ಲಿಗೆ ಬಂದವರು ತಮ್ಮಲ್ಲಿರುವ ಸೇಡು, ಕೋಪ ಎಲ್ಲವನ್ನು ಬಿಟ್ಟು ಹೊಸ ಮನುಷ್ಯರಾಗಿ ರೂಪುಗೊಳ್ಳಬೇಕು. ಅದಕ್ಕೆ ಪೂರಕವಾಗಿ ಕಾರಾಗೃಹದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೈದಿಗಳು ಇವುಗಳ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಪ್ರೀತಿ ಆರ್. ಹೇಳಿದರು.

ಪ್ರಾಧಿಕಾರದ ಮುಖ್ಯ ಕಾನೂನು ಅಭಿರಕ್ಷಕ ವಿಜಯಕುಮಾರ್ ಮಾತನಾಡಿದರು. ಜೈಲರ್ ಇಮಾಮ್ ಖಾಸಿಂ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-14-90724526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.