ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ: ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Published 11 ಜುಲೈ 2024, 4:25 IST
Last Updated 11 ಜುಲೈ 2024, 4:25 IST
ಅಕ್ಷರ ಗಾತ್ರ

ರಾಮನಗರ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ, ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕು ತಹಶೀಲ್ದಾರ್ ವಿಜಿಯಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ನೇತೃತ್ವದ ಅಧಿಕಾರಿಗಳ ತಂಡವು, ಬೆಳಿಗ್ಗೆಯೇ ಪಟ್ಟಣದಲ್ಲಿರುವ ವಿಜಿಯಣ್ಣ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ತುಮಕೂರು ಜಿಲ್ಲೆಯವರಾದ ವಿಜಿಯಣ್ಣ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿ ಹಾರೋಹಳ್ಳಿಎ ವರ್ಗಾವಣೆಯಾಗಿದ್ದರು.

ತಮ್ಮ ಸೇವಾವಧಿಯಲ್ಲಿ ವಿಜಿಯಣ್ಣ ಅವರು, ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿರುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ, ಲೋಕಾಯುಕ್ತ ಪೊಲೀಸರು ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT