ಮಾಗಡಿ: ತಾಲ್ಲೂಕಿನ ತಗ್ಗೀಕುಪ್ಪೆ ಗ್ರಾ.ಪಂ. ವ್ಯಾಪ್ತಿಯ ಕರಗದಹಳ್ಳಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿಪಾಳ್ಯ ಕೃಷ್ಣಮೂರ್ತಿ ಮಾತನಾಡಿ, ಶಾಸಕ ಎಚ್.ಸಿ. ಬಾಲಕೃಷ್ಣ ಅಧಿಕಾರಕ್ಕೆ ಬಂದ ಮೇಲೆ ಎಸ್ಸಿಪಿ ಯೋಜನೆಯಡಿ ₹10 ಕೋಟಿಗೂ ಅಧಿಕ ಅನುದಾನ ತಂದು ಅನೇಕ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಈಗಾಗಲೇ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಕಾಮಗಾರಿ ನಡೆದಿದ್ದು ₹2.5 ಕೋಟಿ ವೆಚ್ಚದ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಭಿವೃದ್ಧಿ ಕೆಲಸಗಳು ವೇಗವಾಗಿ ನಡೆಯುತ್ತಿವೆ. ಕರ್ಲಹಳ್ಳಿಯಲ್ಲಿ ಪೈಪ್ಲೈನ್ ಅಳವಡಿಕೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಎರಡು ದಿನ ಕಾಲಾವಕಾಶ ಪಡೆದು ನಂತರ ರಸ್ತೆ ಕೆಲಸಗಳನ್ನು ಆರಂಭಿಸಲಾಗುವುದು. ಗುಣಮಟ್ಟದ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿಗಳಿಗೆ ಬಾಕ್ಸ್ ಅಳವಡಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ತಗ್ಗೀಕುಪ್ಪೆ ಗ್ರಾ.ಪಂ.ಅಧ್ಯಕ್ಷೆ ತೇಜಸ್ವಿನಿ ಚಿಕ್ಕರಾಜು, ಪಂಚಾಯಿತಿ ಸದಸ್ಯರಾದ ಮುರಳಿ, ಬೈರಪ್ಪ, ಗುತ್ತಿಗೆದಾರ ದೇವರಾಜು, ಸಿದ್ದರಾಜು, ಹರೀಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-63574457

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.