ರಾಮನಗರ: ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯ ಯೋಜನೆ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸಲಾಗಿತ್ತು.

ಸಭೆಯಲ್ಲಿ ಮಾತನಾಡಿದ ಚಂದ್ರಯ್ಯ, ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಇಡೀ ದೇಶದಲ್ಲಿರುವ ಹಸ್ತಪ್ರತಿಗಳ ಮಾಹಿತಿಯನ್ನು ಸಂಗ್ರಹ ಮಾಡಿ, ಅದನ್ನು ರಾಷ್ಟ್ರೀಯ ಭಂಡಾರ ದತ್ತಾಂಶದ ಮೂಲಕ ವಿಶ್ವಕ್ಕೆ ಹಂಚಿಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಈ ಯೋಜನೆಯಡಿಯಲ್ಲಿ ರಾಷ್ಟ್ರದಾದ್ಯಂತ ಶತಮಾನಗಳಷ್ಟು ಹಳೆ ಕೈಬರಹ, ಪಠ್ಯ, ಹಸ್ತಪ್ರತಿ ಮತ್ತು ದಾಖಲೆಗಳ ಇಂದಿನ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುವಾದ ಮತ್ತು ಪ್ರಕಟಣೆ ಮಾಡುವ ಮೂಲಕ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಭವಿಷ್ಯದ ಪೀಳಿಗೆಗೆ ತಿಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಯೋಜನೆಗೆ ಸಂಬಂಧಿಸಿದಂತೆ ಹಸ್ತಪ್ರತಿಗಳನ್ನು ಪತ್ತೆ ಹಚ್ಚಲು ಹಾಗೂ ತಮ್ಮ ಸಂಸ್ಥೆಯಲ್ಲಿ ಯಾವುದೇ ದಾಖಲೆ ಇದ್ದರೆ ಮಾಹಿತಿ ನೀಡಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆ, ಚುಂಚನಗಿರಿ ಮಠ ರಾಮನಗರ ಹಾಗೂ ದೇಗುಲ ಮಠ ಕನಕಪುರ ಸಿಬ್ಬಂದಿಗೆ ಸೂಚಿಸಿದರು. ಸಭೆಯಲ್ಲಿ ಹಾಜರಿದ್ದ ಸಂಸ್ಥೆಯ ಪ್ರತಿನಿಧಿಗಳು ಇದರ ಬಗ್ಗೆ ಕೂಡಲೇ ಪರಿಶೀಲಿಸಿ ಮಾಹಿತಿಯನ್ನು ಪ್ರವಾಸೋದ್ಯಮ ಇಲಾಖೆಗೆ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಎಚ್.ಡಿ.ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮರಳೆಗವಿ ಮಠ, ದೇಗುಲ ಮಠ, ಅಬ್ಬೂರು ಮಠ, ವಾದಿರಾಜರ ಮಠ, ಅಪ್ರಮೇಯ ದೇವಾಲಯ, ಹಳೆ ಬ್ರಾಹ್ಮಣರ (ಪುರೋಹಿತರ) ಮನೆಗಳು, ಹಳೇ ದೇವಾಲಯಗಳಲ್ಲಿ ಹಸ್ತ ಪ್ರತಿಗಳು ಲಭ್ಯವಿರುವ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದರು.

ಜಾನಪದ ಲೋಕದ ಕ್ಯೂರೇಟರ್ ಡಾ.ಯು.ಎಂ.ರವಿ ಮಾತನಾಡಿ, ಜಾನಪದ ಲೋಕದಲ್ಲಿ 150 ಹೆಚ್ಚು ತಾಳೆಗರಿ ಹಸ್ತಪ್ರತಿ, 5 ಕಡತಗಳು, ಜಾನಪದ ಲೋಕದ ನಿರ್ಮಾತೃ ಎಚ್.ಎಲ್.ನಾಗೇಗೌಡ ಅವರ ಕೈಬರಹದ 12 ದಿನಚರಿ ಡೇರಿಗಳು, ಭೂಮಿಗೆ ಬಂದ ಗಂಧರ್ವ, ಸೋಬಾನೆ ಚಿಕ್ಕಮ್ಮನ ಪದಗಳು, ಪ್ರವಾಸಿ ಕಂಡ ಇಂಡಿಯಾ, ಡೊಡ್ಡ ಮನೆ ಪುಸ್ತಕಗಳು ಲಭ್ಯವಿದೆ ಎಂದು ಸಭೆಗೆ ತಿಳಿಸಿದರು. ಸಭೆಯಲ್ಲಿ ಜ್ಞಾನ ಭಾರತಂ ಮಿಷನ್ ಸದಸ್ಯರು, ಸಂಬಂಧಪಟ್ಟ ಮಠಗಳ ಆಡಳಿತ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-1617495254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.