ಹಾರೋಹಳ್ಳಿ: ತಾಲ್ಲೂಕಿನ ಮರಳವಾಡಿ ಹೋಬಳಿ ವ್ಯಾಪ್ತಿಯಲ್ಲಿ ಅಪರಾಧ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ಬೇಡಿಕೆ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ.

ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಗೆ ಒಂದೇ ಠಾಣೆ ಇರುವುದರಿಂದ ವ್ಯಾಪ್ತಿ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು ಹಲವು ತೊಂದರೆ ಎದುರಿಸುತ್ತಿದ್ದಾರೆ. ಪ್ರತ್ಯೇಕ ಠಾಣೆ ನೀಡಿದರೆ ಅಪರಾಧ ಕಡಿಮೆ ಮಾಡಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮರಳವಾಡಿ ಹೋಬಳಿಯು ಸುಮಾರು 52 ಹಳ್ಳಿಗಳು ಮತ್ತು 6 ಪಂಚಾಯಿತಿಗಳನ್ನು ಒಳಗೊಂಡಿದೆ. ಇದರ ಜೊತೆಗೆ ಏಷ್ಯಾದ 2ನೇ ಅತಿದೊಡ್ಡ ಕೈಗಾರಿಕಾ ಪ್ರದೇಶ ಮತ್ತು ಎರಡು ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಹಾರೋಹಳ್ಳಿ ಠಾಣೆ ವ್ಯಾಪ್ತಿಗೆ ಬರುತ್ತವೆ. ಇಷ್ಟು ದೊಡ್ಡ ಪ್ರದೇಶದಲ್ಲಿ ಅಪರಾಧ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಮರಳವಾಡಿ ಹೋಬಳಿಯು ತಮಿಳುನಾಡಿನ ಗಡಿಗೆ ಸಂಪರ್ಕ ಹೊಂದಿದೆ. ಅರಣ್ಯ ಪ್ರದೇಶವನ್ನೂ ಒಳಗೊಂಡಿದೆ. ಈಚೆಗೆ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಮೊನ್ನೆಯಷ್ಟೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಹೋಬಳಿಯಾದ್ಯಂತ ಅಕ್ರಮ ಮದ್ಯ ಮಾರಾಟ, ಗಾಂಜಾ ಮಾರಾಟ ಸೇರಿದಂತೆ ಅಕ್ರಮ ಚಟುವಟಿಕೆ ಜೋರಾಗಿದೆ. ತಮಿಳುನಾಡು ಗಡಿ ಹತ್ತಿರವಿರುವುದರಿಂದ ಗಾಂಜಾ ಸಾಗಣೆ ನಿರ್ಭಯವಾಗಿ ನಡೆಯುತ್ತಿದೆ. ಪೊಲೀಸರು ನಿಗಾ ವಹಿಸಿದರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ.

ಪೊಲೀಸ್ ಠಾಣೆ ದೂರದಲ್ಲಿರುವುದರಿಂದ ಅನೇಕ ಪ್ರಕರಣ ಬೆಳಕಿಗೆ ಬರುತ್ತಿಲ್ಲ. ರಾಜಕೀಯ ಮುಖಂಡರು ಮತ್ತು ಪ್ರಭಾವಿಗಳ ಮಧ್ಯಪ್ರವೇಶದಿಂದ ಸಾಮಾನ್ಯ ಜನರಿಗೆ ನ್ಯಾಯ ಸಿಗುತ್ತಿಲ್ಲ. ಪೊಲೀಸರ ಮೊರೆ ಹೋಗಲೂ ಜನರು ಹಿಂಜರಿಯುತ್ತಿದ್ದಾರೆ.

ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ನಿರ್ಮಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅಕ್ರಮ ಗೋವು ಸಾಗಣೆ ತಡೆಗಟ್ಟಲು ಇದರಿಂದ ಅನುಕೂಲವಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-14-696291485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.