ಕನಕಪುರ: ತಾಲ್ಲೂಕಿನ ಪ್ರವಾಸಿ ತಾಣ ಸಂಗಮ ಬಳಿ ಒಂಟಿ ಸಲಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾನುವಾರ ಮತ್ತು ಸೋಮವಾರ ಸಂಗಮ ಮತ್ತು ಮೇಕೆದಾಟು ಪ್ರವಾಸಿ ತಾಣಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಒಂಟಿ ಸಲಗ ಗುರುವಾರ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಿಗರಿದ್ದ ಜಾಗದಲ್ಲಿ ನೀರು ಕುಡಿಯಲು ಧಾವಿಸಿತ್ತು. ಭಯಭೀತರಾದ ಪ್ರವಾಸಿಗರು ಪ್ರಾಣಭೀತಿಯಿಂದ ದಿಕ್ಕಾಪಾಲಾಗಿ ಓಡಿ ಹೋಗಿಡಿದ್ದರು.

ಒಂಟಿ ಸಲಗದಿಂದ ಪ್ರವಾಸಿಗರಿಗೆ ಯಾವುದೇ ರೀತಿಯ ಹಾನಿ ಅಥವಾ ತೊಂದರೆಯಾಗಲಿ ಆಗಿರಲಿಲ್ಲ. ಭಯದಲ್ಲಿ ಓಡುವಾಗ ಮಹಿಳೆಯೊಬ್ಬರು ಕೆಳಗೆ ಬಿದ್ದು ಸಣ್ಣಪುಟ್ಟ ಪೆಟ್ಟಾಗಿತ್ತು. ಅರಣ್ಯ ಅಧಿಕಾರಿಗಳು ಮಹಿಳೆಯನ್ನು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು.

ಕಾಡಾನೆಯನ್ನು ಅರಣ್ಯ ಇಲಾಖೆ ನೌಕರರು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದರು. ಕಾಡಿಗೆ ಮರಳಿದ್ದ ಆನೆ ಶನಿವಾರ ಮತ್ತೆ ಕಾಣಿಸಿಕೊಂಡು, ಆತಂಕ ಸೃಷ್ಟಿಸಿದೆ. ಒಂಟಿ ಸಲಗ ಕಾವೇರಿ ನದಿಯ ಆಸುಪಾಸಿನಲ್ಲಿಯೇ ಇರುವುದರಿಂದ ಭಾನುವಾರ ಮತ್ತು ಸೋಮವಾರವೂ ಪ್ರವಾಸಿಗರು ಸಂಗಮ ಮತ್ತು ಮೇಕೆದಾಟು ಪ್ರವಾಸಿ ತಾಣಕ್ಕೆ ಹೋಗದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ಬೇಸಿಗೆ ರಜೆ ಇರುವುದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸಂಗಮ ಮತ್ತು ಮೇಕೆದಾಟು ಪ್ರವಾಸಿ ತಾಣಕ್ಕೆ ಬರುತ್ತಿದ್ದು ದಿಡೀರ್ ಆಗಿರುವಂತಹ ಬದಲಾವಣೆಗೆ ಪ್ರವಾಸಿಗರು ಸಹಕರಿಸುವಂತೆ ವನ್ಯಜೀವಿ ವಲಯ ಅರಣ್ಯ ಅಧಿಕಾರಿ ಅನಿಲ್ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-14-1836288337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.