ರಾಮನಗರ: ತಾಲ್ಲೂಕಿನ ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪನಹಳ್ಳಿ, ಕೆಂಜಿಗಾರನಹಳ್ಳಿ, ಕೇತೋಹಳ್ಳಿ, ಅರಳಿಮರದೊಡ್ಡಿ, ಬಸವನಪುರ, ಗಂಗರಾಜನಹಳ್ಳಿ, ಮಾಯಗಾನಹಳ್ಳಿ ಹಾಗೂ ಮಾದಾಪುರ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಅಂಗನವಾಡಿ ಕಟ್ಟಡ ನಿರ್ಮಾಣ ಹಾಗೂ ಕೊಳವೆಬಾವಿ ಕೊರೆಯುವ ಕಾಮಗಾರಿಗೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಂಗಳವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಸುಮಾರು ₹5 ಕೋಟಿ ವೆಚ್ಚದಲ್ಲಿ ವಿವಿಧ ಇಲಾಖೆಗಳ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರೊಂದಿಗೆ ಪಂಚಾಯಿತಿ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ’ ಎಂದರು.

‘ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಅದಕ್ಕಾಗಿ ಅಗತ್ಯ ಇರುವೆಡೆ ಕೊಳವೆಬಾವಿ ಕೊರೆಯಲಾಗುತ್ತಿದೆ. ಇನ್ನೂ ಎರಡು ತಿಂಗಳು ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಅನಿವಾರ್ಯ ಇರುವೆಡೆಗೆ ಟ್ಯಾಂಕರ್ಗಳಲ್ಲಿ ನೀರು ಪೂರೈಕೆ ಮಾಡಬೇಕು’ ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು, ತಾಲ್ಲೂಕು ಅಧ್ಯಕ್ಷ ವಿ.ಎಚ್. ರಾಜು, ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೋಭಾ, ಕಾಂಗ್ರೆಸ್ ಮುಖಂಡರಾದ ಪರಮಶಿವಯ್ಯ, ಶಿವಲಿಂಗಯ್ಯ, ರೇವಣ್ಣ, ರಂಜಿತ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-14-2097759027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.