ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಕೈಲಾಂಚ ಅಭಿವೃದ್ಧಿಗೆ ಒತ್ತು

ಗ್ರಾಮದ ಆಸ್ಪತ್ರೆ ಆವರಣದಲ್ಲಿ ಶೌಚಾಲಯ, ಉದ್ಯಾನ ಉದ್ಘಾಟನೆ
Last Updated 10 ಜೂನ್ 2020, 11:58 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಕೈಲಾಂಚ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಚಭಾರತ್ ಮಿಷನ್ ಅಡಿಯಲ್ಲಿ ತಲಾ ₹5 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸಮುದಾಯ ಶೌಚಾಲಯ, ಉದ್ಯಾನ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕಿ ಅನಿತಾ ಕುಮಾರಸ್ವಾಮಿ ಬುಧವಾರ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅನಿತಾ "ಕೈಲಾಂಚ ಗ್ರಾಮವು ಹೋಬಳಿ ಕೇಂದ್ರವಾಗಿದ್ದು, ಇಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರಕ್ಕೆ ಬೇಕಾದ ರಸ್ತೆ, ಚರಂಡಿ, ಕುಡಿಯುವ ನೀರಿನ ಸೌಲಭ್ಯ, ಹಲವು ಸರ್ಕಾರಿ ಕಚೇರಿಗಳಿಗೆ ಮೂಲ ಸೌಲಭ್ಯ ನೀಡಲಾಗಿದೆ. ಗ್ರಾ.ಪಂ. ಅಧಿಕಾರಿಗಳು, ಜನಪ್ರತಿನಿಧಿಗಳ ಶ್ರಮದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಉತ್ತಮ ಉದ್ಯಾನ ಹಾಗೂ ಸಮುದಾಯ ಶೌಚಾಲಯ ನಿರ್ಮಾಣವಾಗಿದೆ’ ಎಂದು ಹೇಳಿದರು.

ನಾಡಕಚೇರಿಯ ನೂತನ ಕಟ್ಟಡ ಕಾಮಗಾರಿ ಮುಗಿದಿದ್ದು ಈ ತಿಂಗಳ ಅಂತ್ಯದಲ್ಲಿ ಉದ್ಘಾಟಿಸಲಾಗುವುದು. ಕೊರೊನಾ ಹಿನ್ನಲೆಯಲ್ಲಿ ಸಾರ್ವಜನಿಕರು ಆದಷ್ಟು ಅನವಶ್ಯಕ ಪ್ರಯಾಣ ಮುಂದೂಡಿ ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಆರೋಗ್ಯದ ಕಡೆ ಗಮನ ನೀಡಿ ಎಂದು ಸಲಹೆ ನೀಡಿದರು.

ಜಿ.ಪಂ. ಸದಸ್ಯೆ ಪ್ರಭಾವತಿ ಶಿವಲಿಂಗಯ್ಯ, ಕೈಲಾಂಚ ಗ್ರಾ.ಪಂ. ಅಧ್ಯಕ್ಷ ಆರ್. ಪಾಂಡುರಂಗ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಅಶ್ವಥ್, ಎಪಿಎಂಸಿ ಅಧ್ಯಕ್ಷ ದೊರೆಸ್ವಾಮಿ, ಮಾಜಿ ಉಪಾಧ್ಯಕ್ಷ ವೆಂಕಟೇಶ್, ಜಿ.ಪಿ. ಗೀರೀಶ್‍ವಾಸು, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಜೆಡಿಎಸ್ ವಕ್ತಾರ ಬಿ. ಉಮೇಶ್, ನಗರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಆರ್. ಗೌಡ, ಗ್ರಾ.ಪಂ. ಸದಸ್ಯರಾದ ಗೋಪಾಲನಾಯ್ಕ, ವರದರಾಜು, ಬೋರಯ್ಯ, ಸಿದ್ದಪ್ಪಾಜಿ, ವೈದ್ಯ ಡಾ. ತುಳಸೀರಾಮ್ ಮುಖಂಡರಾದ ಶಿವಲಿಂಗಯ್ಯ, ಎಚ್.ಎಸ್. ದೇವರಾಜು, ನವೀನ್, ಕರಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT