ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ–ಚನ್ನಪಟ್ಟಣ ನಗರಸಭೆ ಚುನಾವಣೆಗೆ ಸಿದ್ಧತೆ

Last Updated 19 ಏಪ್ರಿಲ್ 2021, 3:43 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ಎರಡು ನಗರಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜಿಲ್ಲೆಯ ಬಿಜೆಪಿ ಮುಖಂಡರ ಜೊತೆ ಶನಿವಾರ ಬೆಂಗಳೂರಿನಲ್ಲಿ ಸಮಾಲೋಚನೆನಡೆಸಿದರು.

ಇದುವರೆಗೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಪಿಮುಷ್ಠಿಯಲ್ಲಿದ್ದ ರಾಮನಗರ–ಚನ್ನಪಟ್ಟಣ ನಗರಸಭೆಗಳನ್ನು ಈ ಬಾರಿ ಬಿಜೆಪಿ ಗೆಲ್ಲಲೇಬೇಕು. ಮಂಗಳವಾರದಿಂದಲೇ ಎರಡೂ ಕಡೆ ವ್ಯವಸ್ಥಿತವಾಗಿ ಪ್ರಚಾರ ನಡೆಸಬೇಕು. ಎಲ್ಲರೂ ಒಗ್ಗಟ್ಟಾಗಿ ಮನೆಮನೆಗೂ ತೆರಳಿ ಮತಯಾಚನೆ ಮಾಡಬೇಕು ಎಂದು ಅವರು ಮುಖಂಡರಿಗೆ ನಿರ್ದೇಶನ ನೀಡಿದರು.

ಬೆಂಗಳೂರಿಗೆ ಅತಿ ಹತ್ತಿರದಲ್ಲಿದ್ದರೂ ರಾಮನಗರ ಈಗಲೂ ದೊಡ್ಡ ಹಳ್ಳಿಯಂತೆ ಕಾಣುತ್ತದೆ. ಹೇಳಿಕೊಳ್ಳುವಂಥ ಒಂದು ರಸ್ತೆ ಇಲ್ಲ. ಸಮರ್ಪಕ ಮೂಲಸೌಕರ್ಯಗಳಿಲ್ಲ. ಒಳಚರಂಡಿ ವ್ಯವಸ್ಥೆ ಇಲ್ಲ. ಸುಸಜ್ಜಿತ ಬಸ್‌ ನಿಲ್ದಾಣವಿಲ್ಲ. ನಾವು ಅಧಿಕಾರಕ್ಕೆ ಬರುವ ತನಕ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಒಂದೇ ಒಂದು ವೆಂಟಿಲೇಟರ್‌ ಇರಲಿಲ್ಲ. ಜನರು ಅನಾರೋಗ್ಯವಾದರೆ ಬೆಂಗಳೂರಿಗೆ ಓಡಿ ಹೋಗುವ ಪರಿಸ್ಥಿತಿ ಇತ್ತು. ಈ ಎಲ್ಲ ಅಂಶಗಳನ್ನು ಜನರಿಗೆ ಮನದಟ್ಟು ಮಾಡಬೇಕು, ಅವರನ್ನು ಒಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಮನಗರದ ಜನ ಉದ್ಯೋಗ ಬೇಕೆಂದರೆ ಬೆಂಗಳೂರಿಗೇ ಬರಬೇಕು. ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ವಿಫಲವಾಗಿವೆ. ಜಿಲ್ಲೆಯಿಂದ ಗೆದ್ದು ಹೋಗಿ ಅಧಿಕಾರ ಅನುಭವಿಸಿದವರು ಏನು ಮಾಡಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮುಖಂಡರಿಗೆ ಅವರು ಸಲಹೆ ನೀಡಿದರು.

ವಿಧಾನ ಪರಿಷತ್‌ ಸದಸ್ಯರಾದ ಅ. ದೇವೇಗೌಡ, ಪುಟ್ಟಣ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲವಾಡಿ ದೇವರಾಜು, ಸಂಘಟನಾ ಕಾರ್ಯದರ್ಶಿ ಕಾಂತರಾಜು, ಕೇಶವ ಪ್ರಸಾದ್‌ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT