ರಾಮನಗರ: ಫೆ.10ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಿಸಲಾಯಿತು. 1ರಿಂದ 19 ವರ್ಷ ವಯಸ್ಸಿನ ಎಲ್ಲ ಮಕ್ಕಳಿಗೂ ಜಂತುಹುಳು ನಾಶಕ ಆಲ್ಬೆಂಡಜೋಲ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ಆರೋಗ್ಯ ಅಧಿಕಾರಿ ಡಾ.ರಾಜು ತಿಳಿಸಿದರು.

ನಗರದ ಐಜೂರು ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇದೆ ಎಂದು ವಿವರಿಸಿದರು.

ಇದನ್ನು ತಡೆಗಟ್ಟಲು ಮಾತ್ರೆ ವಿತರಣೆ ನಡೆಯುತ್ತಿದೆ. ಶಾಲೆಗೆ ಬಾರದ ಮಕ್ಕಳಿಗೆ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಮಾತ್ರೆ ಕೊಡಲಿದ್ದಾರೆ. ಯಾವುದೇ ಕಾರಣದಿಂದ ಮಾತ್ರೆ ಸೇವಿಸಲು ವಿಫಲರಾದ ಮಕ್ಕಳಿಗೆ ಫೆ. 16ರಂದು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಪ್ರತಿನಿಧಿ ಭಾರತಿ, ಮಕ್ಕಳು ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಮಾತ್ರೆ ಸೇವಿಸುವಂತೆ ಮನವಿ ಮಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತಾ, ವಿವಿಧ ಆರೋಗ್ಯ ಅಧಿಕಾರಿಗಳು, ಶಾಲಾ ಶಿಕ್ಷಕರು, ಆರೋಗ್ಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.