ರಾಮನಗರ: ಜಿಲ್ಲೆಯ ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಜುಲೈ 11ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಅಧ್ಯಕ್ಷ ಎಂ.ಎಚ್. ಅಣ್ಣಯ್ಯನವರ ತಿಳಿಸಿದ್ದಾರೆ.

ಅದಾಲತ್ಗಾಗಿ ಜುಲೈ 10ರವರೆಗೆ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳಲಾಗುವುದು. ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಕಲಾಪ ನಡೆಯಲಿದೆ. ಕಲಾಪಗಳಲ್ಲಿ ವಕೀಲರು ಭಾಗವಹಿಸಬಹುದು. ಅವಶ್ಯಕತೆ ಇದ್ದಲ್ಲಿ ಕಕ್ಷಿದಾರರನ್ನು ಆನ್ಲೈನ್ ಮೂಲಕ ಸಂಪರ್ಕಿಸಲಾಗುವುದು.

ಜಿಲ್ಲೆಯಲ್ಲಿ ಒಟ್ಟು 59,507 ಪ್ರಕರಣಗಳು ಬಾಕಿ ಇವೆ. ಅವುಗಳ ಪೈಕಿ ರಾಜಿಯಾಗಬಹುದಾದ ಎಲ್ಲಾ ಪ್ರಕರಣಗಳನ್ನು ಅದಾಲತ್ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಕೈಗೆತ್ತಿಕೊಳ್ಳಲಾಗುತ್ತದೆ. ವಕೀಲರು ಖುದ್ದಾಗಿ ಹಾಗೂ ಆನ್ಲೈನ್ ಮೂಲಕ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ಲೋಕ ಅದಾಲತ್ಗೆ ಚಾಲನೆ ನೀಡಲಾಗಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತ ಪಿ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-14-1049354801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.