ರಾಮನಗರ: ವೈದ್ಯಕೀಯ ಪದವಿ ಕೋರ್ಸ್ಗಳಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್ (ಎನ್ಇಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ಎಸ್ಯುಐ) ನಗರದಲ್ಲಿ ಗುರುವಾರ ಸಂಜೆ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಿತು.

ನಗರದ ಬಿ.ಎಂ. ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಜಮಾಯಿಸಿದ ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಲ್ಲಿಂದ ಪಂಜುಗಳೊಂದಿಗೆ ಕೆಂಗಲ್ ಹನುಮಂತಯ್ಯ ಹನುಮಂತಯ್ಯ ವೃತ್ತದ ಮೆರವಣಿಗೆ ತೆರಳಿದರು. ಮಾರ್ಗದ ಉದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿದವು. ನಂತರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದು ಕಾರಣಕ್ಕಾಗಿ ದೇಶದಾದ್ಯಂತ ಇದುವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸುವ ಸಾಮರ್ಥ್ಯವಿಲ್ಲದ ಸರ್ಕಾರ, ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಸಾಂತ್ವನ ಸಹ ಹೇಳಿಲ್ಲ. ಇದು ಸರ್ಕಾರದ ಕಲ್ಲು ಹೃದಯಕ್ಕೆ ಸಾಕ್ಷಿ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅಸಮಾಧಾನ ಹೊರಹಾಕಿದರು.

ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ಹಾಗೂ ಪಾರದರ್ಶಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿಯಿಂದಾಗಿ ದೇಶದ ಲಕ್ಷಾಂತರ ಮಂದಿಯ ಕನಸುಗಳನ್ನು ಭಗ್ನಗೊಳಿಸಿದೆ ಎಂದು ಒಕ್ಕೂಟದ ರಾಜ್ಯ ಪ್ರಾಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆಯ ನೈತಿಕ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಸೋರಿಕೆಯಂತಹ ಘಟನೆಗಳು ಇನ್ನು ಮುಂದೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದೇಶದಾದ್ಯಂತ 22 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದರು. ಅವರಿಗೆ ಕೇಂದ್ರ ಸರ್ಕಾರ ನ್ಯಾಯ ಸಿಗಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಅಲ್ಲದೆ, ಘಟನೆಯ ಹೊಣೆ ಹೊತ್ತಿರುವ ಸಚಿವ ಧರ್ಮೆಂದ್ರ ಪ್ರದಾನ್ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಅಮರ್ ಒತ್ತಾಯಿಸಿದರು.

ಒಕ್ಕೂಟದ ರಾಜ್ಯ ಉಪಾಧ್ಯಕ್ಷ ರಫೀಕ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷ ಎಂ.ಕೆ. ಫೈರೋಜ್, ರಾಮನಗರ ಟೌನ್ ಅಧ್ಯಕ್ಷ ಪುನೀತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಖಿತ್, ಕಾರ್ಯದರ್ಶಿ ಸುಪ್ರೀತ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-14-1634666497

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.