ರಾಮನಗರ: ನೈಸ್ ಕಂಪನಿಯು ರೈತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುವ ಜೊತೆಗೆ, ಈ ಕುರಿತು ದನಿ ಎತ್ತಿದ ಹೋರಾಟಗಾರರ ವಿರುದ್ಧ ಅಪಪ್ರಚಾರ ನಡೆಸುತ್ತಿದೆ ಎಂದು ಆರೋಪಿಸಿರುವ ನಡೆಸುತ್ತಿರುವ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘವು, ನೈಸ್ ಭೂ ಸ್ವಾಧೀನ ಹೋರಾಟ ಸಮಿತಿ ಸಹಯೋಗದಲ್ಲಿ ಕಂಪನಿ ವಿರುದ್ದ ಶುಕ್ರವಾರ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಕುರಿತು ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ಹಾಗೂ ನೈಸ್ ಭೂ ಸ್ವಾಧೀನ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್. ವೆಂಕಟಾಚಲಯ್ಯ, ‘ಕಂಪನಿ ವಿರುದ್ಧ ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಪ್ರತಿಭಟನೆಯಲ್ಲಿ ಹೆಚ್ಚಿನ ರೈತರು ಪಾಲ್ಗೊಳ್ಳಬೇಕು’ ಎಂದರು.

‘ಬೆಂಗಳೂರಿನಿಂದ ಮೈಸೂರಿನವರೆಗೆ ವೇಗದ ಹೆದ್ದಾರಿ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡು 28 ವರ್ಷಗಳಾಗಿವೆ. ಒಪ್ಪಂದದ ಪ್ರಕಾರ ಬೆಂಗಳೂರು–ಮೈಸೂರು ನಡುವೆ 111 ಕಿ.ಮೀ. ಹೆದ್ದಾರಿ ಮತ್ತು 41 ಕಿ.ಮೀ. ಹೊರವರ್ತುಲ ರಸ್ತೆ, 9.8 ಕಿ.ಮೀ. ಲಿಂಕ್ ರಸ್ತೆ ಹಾಗೂ ನಿಯೋಜಿತ 5 ಸ್ಥಳಗಳಲ್ಲಿ ಟೌನ್ಶಿಪ್ ನಿರ್ಮಿಸಬೇಕಿತ್ತು. ಆದರೆ, ಇದುವರೆಗೆ ಯಾವುದೂ ಕಾರ್ಯಗತವಾಗಿಲ್ಲ’ ಎಂದು ದೂರಿದರು.

‘ಬೆಂಗಳೂರು–ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಎನ್ಎಚ್ಎಐ ಮೇಲ್ದರ್ಜೆಗೇರಿಸಿದೆ. ಹಾಗಾಗಿ, ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಅಪ್ರಸ್ತುತವಾಗಿದೆ. ಆದರೂ, ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ರೈತರಿಗೆ 28 ವರ್ಷದ ಹಿಂದಿನ ಭೂ ಸ್ವಾಧೀನ ನೆನಪಿಸಿ ಸಿವಿಲ್ ಕೋರ್ಟ್ನಿಂದ ಆದೇಶ ತಂದು ಭೂಮಿ ತೆರವಿಗೆ ಒತ್ತಾಯಿಸಲಾಗುತ್ತಿದೆ’ ಎಂದು ಆರೋಪಿಸಿದರು.

‘ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ. ಕಾವಲ್ನ ಅರಣ್ಯ ಪ್ರದೇಶ ಮತ್ತು ಬಂಜಾರಪಾಳ್ಯದ ಸರ್ಕಾರಿ ಗೋಮಾಳದಲ್ಲಿ ಕಾನೂನುಬಾಹಿರವಾಗಿ ರಸ್ತೆ ನಿರ್ಮಾಣ ಕಾಮಗಾರಿ ಪ್ರಶ್ನಿಸಿದ ರೈತರರ ಮೇಲೆ ಗೂಂಡಾಗಳನ್ನು ಬಿಟ್ಟು ಹೆಸರಿಸಲಾಗಿದೆ. ಹೋರಾಟಗಾರರ ವಿರುದ್ಧ ಅಪಪ್ರಚಾರ ಮಾಡಿ, ಜೀವ ಬೆದರಿಕೆ ಹಾಕಲಾಗಿದೆ. ಕಂಪನಿಯ ಈ ಎಲ್ಲಾ ನಡೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

ನೈಸ್ ಭೂ ಸ್ವಾಧೀನ ಹೋರಾಟ ಸಮಿತಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ನಾರಾಯಣಪ್ಪ, ಉಪಾಧ್ಯಕ್ಷ ಸಿದ್ದರಾಮಯ್ಯ, ಕುಂಟೀರಪ್ಪ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್, ಸಹ ಕಾರ್ಯದರ್ಶಿ ರಾಜೇಶ್, ನಗರ ಜಿಲ್ಲಾ ಉಪಾಧ್ಯಕ್ಷ ಸಣ್ಣ ರಂಗಯ್ಯ ಹಾಗೂ ಇತರರು ಇದ್ದರು.

ಬೇಡಿಕೆಗಳೇನು?

* ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಬೇಕು.

* ಬಿಎಂಐಸಿ ಯೋಜನೆ ಹಾಗೂ ನೈಸ್ ಕಂಪನಿ ಪಾಲುದಾರಿಕೆ ರದ್ದುಗೊಳಿಸಬೇಕು.

* ರೈತರು ಹೋರಾಟಗಾರರ ಮೇಲೆ ನಿಂದನೆ ಬೆದರಿಕೆ ಹಾಕಿರುವ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.

* ನೈಸ್ ಅಕ್ರಮಗಳ ವಿರುದ್ದ ಹೋರಾಡುತ್ತಿರುವ ರೈತ ನಾಯಕ ಎನ್. ವೆಂಕಚಾಚಲಯ್ಯ ಅವರಿಗೆ ರಕ್ಷಣೆ ಒದಗಿಸಬೇಕು.

* ಕಂಪನಿಯ ಭೂ ಸ್ವಾಧೀನ ಹಾಗೂ ರಸ್ತೆ ನಿರ್ಮಾಣದ ಹಗರಣಗಳ ಕುರಿತು ತನಿಖೆ ಮಾಡಿಸಬೇಕು.

* ರೈತರ ಒಪ್ಪಿಗೆ ಹಾಗೂ ಅವರ ಗಮನಕ್ಕೆ ಬಾರದೆ ನಡೆದಿರುವ ಭೂ ಸ್ವಾಧೀನವನ್ನು ರದ್ದುಪಡಿಸಬೇಕು.

* ನೈಸ್ ಆಕ್ರಮ ಕುರಿತ ಸದನ ಸಮಿತಿ ಮತ್ತು ಸಂಪುಟ ಉಪ ಸಮಿತಿಗಳ ಶಿಪಾರಸ್ಸುಗಳನ್ನು ಜಾರಿಗೊಳಿಸಬೇಕು.

* ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಹಿಂದಿರುಗಿಸಬೇಕು.

* ಭೂ ಸ್ವಾಧೀನ ಪ್ರಕಟಣೆ ಮತ್ತು ಕೋರ್ಟ್ ತೀರ್ಪುಗಳ ಹೆಸರಿನಲ್ಲಿ ರೈತರ ಮೇಲಿನ ನೈಸ್ ಕಂಪನಿಯ ದಬ್ಬಾಳಿಕೆ-ದೌರ್ಜನ್ಯ ನಿಲ್ಲಿಸಬೇಕು.

* ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಒಪ್ಪಂದದಂತೆ ಹೆಚ್ಚಿನ ಪರಿಹಾರ ಹಾಗೂ ನಿವೇಶನ ನೀಡಬೇಕು.

* ಬಿಎಂಐಸಿ ಯೋಜನೆ ನೆಪದಲ್ಲಿ ಕಂಪನಿ ನಡೆಸುತ್ತಿರುವ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ತಡೆಯೊಡ್ಡಬೇಕು.

* ಕಂಪನಿಗೆ ಗುತ್ತಿಗೆಗೆ ನೀಡಿರುವ ಎಲ್ಲಾ ಸರ್ಕಾರಿ ಭೂಮಿಯನ್ನು ಹಿಂಪಡೆದು ವಸತಿ ರಹಿತರಿಗೆ ನಿವೇಶನ ಮಾಡಿ ಹಂಚಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.