ರಾಮನಗರ: ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ತಮ್ಮ ವಾಟ್ಸ್ಆ್ಯಪ್ ಸಂಖ್ಯೆಗೆ ಆನ್ಲೈನ್ ವಂಚಕರು ಕಳಿಸಿದ್ದ ಆರ್ಟಿಒ ಚಲನ್ ಎಪಿಕೆ ಫೈಲ್ ಕ್ಲಿಕ್ ಮಾಡಿದ ಬೆನ್ನಲ್ಲೇ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ₹2.32 ಲಕ್ಷ ಕಡಿತವಾಗಿದೆ. ಈ ಕುರಿತು ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಗಡಿ ತಾಲ್ಲೂಕಿನ ಸೋಲೂರಿನಲ್ಲಿರುವ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ತುಮಕೂರು ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದಶಂಕರ್ ಹಣ ಕಳೆದುಕೊಂಡವರು. ಬೆಂಗಳೂರಿನ ಪೀಣ್ಯದಲ್ಲಿರುವ ಐಡಿಎಫ್ಸಿ ಬ್ಯಾಂಕ್ನಲ್ಲಿ ಶಂಕರ್ ಅವರು ಹೊಂದಿರುವ ಖಾತೆಯಿಂದ ಏಪ್ರಿಲ್ 2ರಂದು ಸಂಜೆ 5 ಗಂಟೆ ಸುಮಾರಿಗೆ ಹಂತ ಹಂತವಾಗಿ 4 ಸಲ ಹಣ ಕಡಿತವಾಗಿತ್ತು.

ಈ ಕುರಿತು, ಅವರು ಬ್ಯಾಂಕ್ ಸ್ಟೇಟ್ಮೆಂಟ್ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿದಾಗ ₹55 ಸಾವಿರ, ₹1 ಲಕ್ಷ, ₹45 ಸಾವಿರ ಹಾಗೂ ₹32,381 ಮೊತ್ತವು ಹಂತ ಹಂತವಾಗಿ ಕಡಿತವಾಗಿತ್ತು. ನಂತರ ಅವರು ತಮ್ಮ ಮೊಬೈಲ್ ಪರಿಶೀಲಿಸಿದಾಗ, ವಾಟ್ಸ್ಆ್ಯಪ್ಗೆ ಬಂದಿದ್ದ ಆರ್ಟಿಒ ಚಲನ್ ಎಪಿಕೆ ಫೈಲ್ ಕ್ಲಿಕ್ ಆಗಿರುವುದು ಗೊತ್ತಾಯಿತು.

ಕೂಡಲೇ ಅವರು ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಿದರು. ಆನ್ಲೈನ್ ವಂಚಕರು ವಾಟ್ಸ್ಆ್ಯಪ್ಗೆ ಎಪಿಕೆ ಫೈಲ್ ಕಳಿಸಿ ಆ ಮೂಲಕ ಶಂಕರ್ ಅವರ ಬ್ಯಾಂಕ್ ಖಾತೆ ಮಾಹಿತಿ ಸೇರಿದಂತೆ ವಿವಿಧ ದತ್ತಾಂಶವನ್ನು ಪಡೆದು, ಆನ್ಲೈನ್ ಮೂಲಕ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಂಚಕರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-14-1161591020

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.