ರಾಮನಗರ: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನೀರು ಸರಬರಾಜು ಸಹಾಯಕ ಅಣ್ಣಾದೊರೆ ವೀರಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಮನಗರ ನಗರಸಭೆಯ ಕಿರಿಯ ಎಂಜಿನಿಯರ್ ಬಿ.ಎಸ್. ನಿರ್ಮಲ ಅವಿರೋಧವಾಗಿ ನೇಮಕವಾಗಿದ್ದಾರೆ.

ಹಿಂದಿನ ಅಧ್ಯಕ್ಷ ವಿ. ವೆಂಕಟೇಶ್ ನಿವೃತ್ತಿ ಬಳಿಕ ತೆರವಾಗಿದ್ದ ಸ್ಥಾನಕ್ಕೆ ರಾಮನಗರ ನಗರಸಭೆಯಲ್ಲಿ ಬುಧವಾರ ಚುನಾವಣೆ ನಡೆಯಿತು. ಇಬ್ಬರನ್ನು ಬಿಟ್ಟರೆ ಬೇರಾರೂ ನಾಮಪತ್ರ ಸಲ್ಲಿಸಲಿಲ್ಲ. ಹಾಗಾಗಿ, ಚುನಾವಣಾಧಿಕಾರಿಯಾಗಿದ್ದ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ನಾಗರಾಜು ಅವರು, ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಬಳಿಕ ಮಾತನಾಡಿದ ಅಣ್ಣಾದೊರೆ, ‘ಸಂಘದ ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಶಾಖೆಗಳ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಲಾಗುವುದು. ಸರ್ಕಾರದಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಸದಸ್ಯರಿಗೆ ತಲುಪಿಸಲು ಶ್ರಮಿಸಲಾಗುವುದು’ ಎಂದು ಹೇಳಿದರು.

ಸಂಘದ ಮಾಗಡಿ ಶಾಖೆ ಅಧ್ಯಕ್ಷ ರವಿಕುಮಾರ್, ಬಿಡದಿ ಶಾಖೆಯ ಚಲಪತಿ, ಕನಕಪುರದ ಜನಾರ್ಧನ್, ಚನ್ನಪಟ್ಟಣದ ಬಿ. ವೆಂಕಟೇಶ್, ರಾಮನಗರದ ದೇವೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-14-254106448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.