ರಾಮನಗರ: ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗವು ನೀಡಿರುವ ವರದಿ ಅವೈಜ್ಞಾನಿಕ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿದೆ. ರಾಜ್ಯ ಸರ್ಕಾರ ಕೂಡಲೇ ವರದಿಯನ್ನು ತಿರಸ್ಕರಿಸಿ ಮರು ಸಮೀಕ್ಷೆ ನಡೆಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ಬಲಗೈ ಸಮುದಾಯಗಳ ಒಕ್ಕೂಟದಿಂದ ನಗರದಲ್ಲಿ ಭಾನುವಾರ ಸಂಜೆ ಪಂಜಿನ ಮೆರವಣಿಗೆ ನಡೆಯಿತು.

ನಗರದ ರೈಲು ನಿಲ್ದಾಣ ರಸ್ತೆಯಲ್ಲಿರುವ ವಾಟರ್ ಟ್ಯಾಂಕ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಸದಸ್ಯರು, ಪಂಜುಗಳನ್ನು ಹಿಡಿದು ಎಂ.ಜಿ. ರಸ್ತೆ ಹಾಗೂ ಮುಖ್ಯರಸ್ತೆ ಮಾರ್ಗವಾಗಿ ಕೆಂಗಲ್ ಹನುಮಂತಯ್ಯ ವೃತ್ತದವರೆಗೆ ಮೆರವಣಿಗೆಯಲ್ಲಿ ಬಂದರು. ಮಾರ್ಗದುದ್ದಕ್ಕೂ ಒಳ ಮೀಸಲಾತಿಯ ಅನ್ಯಾಯದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರಸ್ವಾಮಿ, ಒಳ ಮೀಸಲಾತಿಗೆ ಕೋರ್ಟ್ ತಡೆಯಾಜ್ಞೆ, ರೋಸ್ಟರ್ ಬಿಂದುಗಳ ವಿಷಯದಲ್ಲಿನ ಗೊಂದಲಗಳು ಹಾಗೂ ಶೇ 56ರಷ್ಟು ಮೀಸಲಾತಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವವರೆಗೆ ಒಳ ಮೀಸಲಾತಿ ರಹಿತ ಶೇ 15+3ರಷ್ಟು ಮೀಸಲಾತಿ ಜಾರಿಗೊಳಿಸಿ ಫೆ. 27ರಂದು ಹೊರಡಿಸಿರುವ ಆದೇಶವನ್ನು ಬಲಗೈ ಸಮುದಾಯ ಸ್ವಾಗತಿಸಿರುತ್ತದೆ ಎಂದರು.

ಒಳ ಮೀಸಲಾತಿಯು 101 ಜಾತಿಗಳಿಗೆ ಸಮಾನವಾಗಿ ಹಂಚಿಕೆಯಾಗುವ ದೃಷ್ಟಿಯಿಂದ ಮೀಸಲಾತಿ ಪ್ರಮಾಣ ಹೆಚ್ಚಳ ಅನಿವಾರ್ಯ. ಆದರೆ, 101 ಜಾತಿಗಳ ಪೈಕಿ 01 ಜಾತಿಯ ಒತ್ತಡಕ್ಕೆ ಸರ್ಕಾರ ಮಣಿದು ಶೇ 15+3ರ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಮುಂದಾದರೆ, ಬಲಗೈ ಸಮುದಾಯಗಳಿಗೆ ತುಂಬಾ ಅನ್ಯಾಯವಾಗುತ್ತದೆ. ಆಗ ಸರ್ಕಾರ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿ ಮುಂದೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಸರ್ಕಾರ ಈ ವಿಷಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬ ನೀತಿ ಅನುಸರಿಸದೆ ಎರಡೂ ಸಮುದಾಯಗಳಿಗೆ ಸಮಾನವಾಗಿ ಪಾಲು ಸಿಗುವಂತೆ ಮಾಡಬೇಕು. ಆ ನಿಟ್ಟಿನಲ್ಲಿ, ಒಳ ಮೀಸಲಾತಿಗೆ ಸಂಬಂಧಿಸಿದಂತೆ ಬಲಗೈ ಸಮುದಾಯದ ವಿವಿಧ ಕೆಳಕಂಡ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟವು ಮಾರ್ಚ್ 25ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಅಲ್ಲಿ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನು ಸಲ್ಲಿಸಲಾಗುವುದು. ಈ ಸಮಾವೇಶಕ್ಕೆ ಸಮುದಾಯದ ಜನರು ಒಕ್ಕೊರಲಿನಿಂದ ಬಂದು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮೆರವಣಿಗೆಯಲ್ಲಿ ದಲಿತ ಮುಖಂಡರಾದ ಗವಿಯಯ್ಯ, ಹರೀಶ್ ಬಾಲು, ವೆಂಕಟೇಶ್, ಪ್ರದೀಪ್ ಅಪ್ಪಗೆರೆ , ಕುಮಾರ್, ಹರೀಶ, ಹನುಮಂತಯ್ಯ ಮತ್ತೆಕೆರೆ, ಛಲವಾದಿ ಶೇಖರ್, ಕಿರಣ್ ಬಾಲು , ಮರಿಸ್ವಾಮಿ, ಬಸವರಾಜ್, ಸುರೇಶ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-14-692725831

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.