ರಾಮನಗರ: ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ ಕೇಂದ್ರ ಸರ್ಕಾರವು ರೈಲ್ವೆ ಕ್ಷೇತ್ರವನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಕ್ರಮ ಕೈಗೊಂಡಿದೆ. ಅದಕ್ಕಾಗಿ ವಿಂಡೊ ಟ್ರೈಲಿಂಗ್ ತಪಾಸಣೆ ಮಾಡಿ ವಾಸ್ತವಾಂಶ ಅರಿಯಲಾಗುತ್ತಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಬೆಂಗಳೂರಿನ ಕೆ.ಎಸ್.ಆರ್ ಬೆಂಗಳೂರು-ಮಂಡ್ಯ ನಡುವಣ ರೈಲು ಮಾರ್ಗದ ವಿಂಡೋ ಟ್ರೈಲಿಂಗ್ ತಪಾಸಣೆ ಭಾಗವಾಗಿ ಮಾರ್ಗ ಮಧ್ಯೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ರೈಲು ನಿಲ್ದಾಣವನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರೈಲ್ವೆ ಮೇಲ್ಸೆತುವೆ, ಕೆಳ ಸೇತುವೆ ಕಾಮಗಾರಿ, ರೈಲು ನಿಲ್ದಾಣಗಳಲ್ಲಿ ಸ್ವಚ್ಛತೆ, ಪ್ರಯಾಣದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಆಗುವ ತೊಂದರೆಗಳು ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಇಲಾಖೆಯು ಕ್ರಮ ಕೈಗೊಳ್ಳುತ್ತಿದೆ. ನಿಲ್ದಾಣಗಳನ್ನು ಹೊಸ ಸ್ಪರ್ಶ ನೀಡಲು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ರೈಲ್ವೆ ಇಲಾಖೆಯ ಸೇವೆಗಳು ಬಡವರಿಗೆ ತಲುಪಬೇಕೆನ್ನುವ ನಿಟ್ಟಿನಲ್ಲಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ರೈಲ್ವೆ ವಿಭಾಗದ ಎಸ್ಎಂಆರ್ ವೇಣುಗೋಪಾಲ್, ಸ್ಟೇಷನ್ ಮಾಸ್ಟರ್ ಸತ್ಯೇಂದ್ರ ಕುಮಾರ್, ರೈಲ್ವೆ ರಕ್ಷಣಾ ಬಲದ ಸಿಬ್ಬಂದಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-18-1958217692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.