ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುದೂರು: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಸಮಸ್ಯೆ

Published 5 ಜುಲೈ 2024, 4:33 IST
Last Updated 5 ಜುಲೈ 2024, 4:33 IST
ಅಕ್ಷರ ಗಾತ್ರ

ಕುದೂರು: ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ಪಡಿತರ ಚೀಟಿಯಲ್ಲಿನ ಹೆಸರು ತಿದ್ದುಪಡಿ, ಫೋಟೋ, ನ್ಯಾಯಬೆಲೆ ಅಂಗಡಿ ಬದಲಾವಣೆ, ಹೊಸ ಹೆಸರು ಸೇರ್ಪಡೆ, ಚೀಟಿಯಲ್ಲಿರುವ ಹೆಸರನ್ನು ತೆಗೆಯುವುದಕ್ಕೆ  ಅವಕಾಶ ನೀಡಲಾಗಿದೆ. ಆದರೆ, ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಗ್ರಾಮ ಒನ್ ಕೇಂದ್ರಗಳ ಮುಂದೆ ಪಡಿತರ ಚೀಟಿದಾರರು ಗಂಟೆಗಳ ಕಾಲಿ ಕಾಯುವಂತಾಗಿದೆ.

ಸರ್ವರ್ ಸಮಸ್ಯೆಯಿಂದಾಗಿ ತುರ್ತು ಸೇವೆಗೂ ಪಡಿತರ ಚೀಟಿ ಇಲ್ಲದಂತಾಗಿದೆ. ಚೀಟಿ ಇಲ್ಲದಿದ್ದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಸಾವಿರಾರು ಹಣ ಖರ್ಚು ಮಾಡುವಂತಾಗಿದೆ. ಪಡಿತರ ಚೀಟಿ ತಿದ್ದುಪಡಿ ಅರ್ಜಿ ಹಾಕುವುದಕ್ಕೆ ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಕಾಯುವಂತಾಗಿದೆ. ಹಾಗಾಗಿ ಅರ್ಜಿ ಹಾಕುವ ಅವಧಿಯನ್ನು ಇನ್ನಷ್ಟು ಹೆಚ್ಚಿಸಬೇಕೆಂಬುದು ಸಾರ್ವಜನಿಕರ ಮಾತಾಗಿದೆ.

ರೇಷನ್ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ ಇದೀಗ ಸರ್ವರ್ ಸಮಸ್ಯೆಯಿಂದ ಅರ್ಜಿ ಹಾಕಲು ಆಗುತ್ತಿಲ್ಲ. ಬೆಳಿಗ್ಗೆಯಿಂದ ಅರ್ಜಿ ಹಾಕಲು ಅಲೆದಾಡುತ್ತಿದ್ದೇನೆ ಎಂಬುದು ಪಾರ್ವತಮ್ಮ ಅವರ ಮಾತಾಗಿದೆ.

ಸರ್ವರ್ ಸಮಸ್ಯೆಯಿಂದಾಗಿ ಕಾಯುತ್ತಿರುವ ಜನ 
ಸರ್ವರ್ ಸಮಸ್ಯೆಯಿಂದಾಗಿ ಕಾಯುತ್ತಿರುವ ಜನ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT