ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Ramanagara Rains | ರಾಮನಗರ ಸೇರಿ ವಿವಿಧೆಡೆ ಸಾಧಾರಣ ಮಳೆ

Published 23 ಮೇ 2024, 4:44 IST
Last Updated 23 ಮೇ 2024, 4:44 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನಲ್ಲಿ ಬುಧವಾರ ಮಧ್ಯಾಹ್ನ ರಾಮನಗರ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಸಾಧಾರಣ ಮಳೆ ಸುರಿಯಿತು. ಬಿಸಿಲ ಬೇಗೆಯ ಜೊತೆಗೆ ಆಗಾಗ ಮೋಡ ಕವಿದ ವಾತಾವರಣವು ಕಡೆಗೂ ಮಳೆ ತಂದಿತು. ಕೆಲ ದಿನಗಳಿಂದ ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಸಂತಸಗೊಂಡಿದ್ದಾರೆ.

ಬೆಳಿಗ್ಗೆ ಕೆಲ ಹೊತ್ತು ಇದ್ದ ಮೋಡ ಕವಿದ ವಾತಾವರಣವಿತ್ತು. ನಂತರ ಆವರಿಸಿಕೊಂಡಿದ್ದ ಬಿಸಿಲು ಮಾಯವಾಗಿ ಮಧ್ಯಾಹ್ನ 3.30ರ ಸುಮಾರಿಗೆ ಕೆಲ ನಿಮಿಷ ಸಾಧಾರಣ ಮಳೆ ಸುರಿಯಿತು. ನಂತರ ಸಂಜೆ 5 ಗಂಟೆ ಸುಮಾರಿಗೆ ಮತ್ತೊಮ್ಮೆ ಕೆಲ ನಿಮಿಷ ಮಳೆಯಾಯಿತು.

ಮಳೆಯಿಂದಾಗಿ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸಿದರು. ಕೆಲವರು ರಸ್ತೆ ಬದಿಯ ಕಟ್ಟಡಗಳ ಬಳಿ ನಿಂತು ಆಶ್ರಯ ಪಡೆದರೆ, ಉಳಿದವರು ನೆನೆದುಕೊಂಡೇ ಮಳೆಯನ್ನು ಆನಂದಿಸಿಕೊಂಡು ನಡೆದುಕೊಂಡು ಹೋದರು. ಮಳೆ ಇಲ್ಲದೆ ಮೂಲೆ ಸೇರಿದ್ದ ಛತ್ರಿಗಳ ಸಹ ಅಲ್ಲಲ್ಲಿ ಕಣ್ಣಿಗೆ ಕಂಡವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT