ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು: ಗ್ರಾಮಸ್ಥರಿಂದ ರಕ್ಷಣೆ

Last Updated 29 ಆಗಸ್ಟ್ 2022, 5:30 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಬಿಳಗುಂಬ ಅಂಡರ್ ಪಾಸ್ ನಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಒಂದು ಮಳೆ ನೀರಿನ ಪ್ರವಾಹದಲ್ಲಿ ಸಿಲುಕಿದ್ದು, ಸ್ಥಳೀಯರು ನೆರವಿಗೆ ಧಾವಿಸಿ ರಕ್ಷಣೆ ಮಾಡಿದರು.

ಉದಯರಂಗ ಹೆಸರಿನ ಈ ಬಸ್ ಬೆಂಗಳೂರಿನಿಂದ ಮಳವಳ್ಳಿಗೆ ಹೊರಟಿತ್ತು. ಐವತ್ತಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಬಸ್ ನ ಅರ್ಧ ಮಟ್ಟಕ್ಕೆ ನೀರು ನಿಂತಿದ್ದು, ಮುಂದೆ ಚಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಜನರನ್ನು ಕೆಳಗೆ ಇಳಿಸಲು ಸಾರ್ವಜನಿಕರು ನೆರವಾದರು.

ವಿಡಿಯೊ ನೋಡಿ:


ಮುಳುಗಿದ ಕಾರುಗಳು: ರೈಲು ಸಂಚಾರ ಸ್ಥಗಿತ

ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ರೈಲು ನಿಲ್ದಾಣ ಪೂರ್ತಿ ಜಲಾವೃತಗೊಂಡಿದ್ದು, ಮೈಸೂರು- ಬೆಂಗಳೂರು ನಡುವೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ. ಇದರಿಂದಾಗಿ ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.

ಶಾಲೆ, ಕಾಲೇಜಿಗೆ ರಜೆ

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಸಾಕಷ್ಟು ಕಡೆಗಳಲ್ಲಿ ಮನೆಗೆ ನೀರು ನುಗ್ಗಿದೆ. ಕೆರೆಗಳು ಕೋಡಿ ಬಿದ್ದಿದ್ದು, ರಸ್ತೆಗಳ ಮೇಲೆ ನೀರು ಹರಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT