ರಾಮನಗರ: ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂರು ತಿಂಗಳಿಮೊಮ್ಮೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್. ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಪ್ರಗತಿ ಪರಿಶೀಲನಾ ಸಭೆ ಹಾಗೂ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ, ಸಮುದಾಯದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.

ಆಯೋಗವು ಪ್ರವಾಸ ಮಾಡಿದ ಹಲವು ಜಿಲ್ಲೆಗಳಲ್ಲಿ ಶೇ 50ರಿಂದ 60ರಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಿದೆ. ಆದರೆ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅನ್ಯಾಯದಿಂದ ನೊಂದು ನ್ಯಾಯಕ್ಕಾಗಿ ಬರುವ ಜನರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ವರ್ತಿಸಿ, ಸಮಸ್ಯೆ ಆಲಿಸಬೇಕು ಎಂದು ಸಲಹೆ ನೀಡಿದರು.

ಸ್ಮಶಾನ ಒದಗಿಸಿ: ಗ್ರಾಮಗಳಲ್ಲಿ ಸ್ಮಶಾನವಿದ್ದರೂ ವಿವಿಧ ಕಾರಣಗಳಿಂದಾಗಿ ಅಲ್ಲಿ ಪರಿಶಿಷ್ಟರು ತಮ್ಮವರ ಅಂತ್ಯಕ್ರಿಯೆ ನಡೆಸದ ಸ್ಥಿತಿ ಇದೆ. ಈ ಕುರಿತು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು. ಪರಿಶಿಷ್ಟರ 25-30 ಮನೆಗಳಿದ್ದರೆ ಅಲ್ಲಿಗೆ ಪ್ರತ್ಯೇಕ ಸ್ಮಶಾನ ವ್ಯವಸ್ಥೆ ಮಾಡಿ ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಸಮುದಾಯದವರ ಪೋಡಿ, ಜಮೀನಿಗೆ ದಾರಿ ಬಿಡಿಸುವುದು, ಸರ್ವೆ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಅರ್ಜಿಗಳ ಕುರಿತು ಭೂ ಮಾಪನ ಇಲಾಖೆಯವರು ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದರು.

ಅನುದಾನ ಬಳಸಿ: ಎಲ್ಲಾ ಇಲಾಖೆಗಳು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ಅನುದಾನ ವಾಪಸ್ ಕಳಿಸಬಾರದು. ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಕಡ್ಡಾಯವಾಗಿ ಬೋರ್ಡ್ ಹಾಕಬೇಕು ಎಂದು ಸೂಚನೆ ನೀಡಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯದಲ್ಲಿ ವಾಸಿಸುತ್ತಿರುವ ಅಲೆಮಾರಿ ಮತ್ತು ಬುಡಕಟ್ಟು ಸಮುದಾಯದವರನ್ನು ಒಕ್ಕಲೆಬ್ಬಿಸಬಾರದು ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಆಯೋಗ ಪತ್ರ ಬರೆದಿದೆ. ಅರಣ್ಯ ಇಲಾಖೆಯವರು ವಿನಾ ಕಾರಣ ಈ ಸಮುದಾಯದವರಿಗೆ ತೊಂದರೆ ಕೊಡಬಾರದು ಎಂದು ಕಿವಿಮಾತು ಹೇಳಿದರು.

ಹಾಸ್ಟೆಲ್ ಭೇಟಿ: ಬಾಡಿಗೆ ಕಟ್ಟಡದಲ್ಲಿರುವ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಸೌಕರ್ಯಗಳು ಸಿಗದಿರುವುದು, ಗುಣಮಟ್ಟದ ಆಹಾರ ನೀಡದಿರುವುದು, ಸ್ವಚ್ಛತೆ ಕೊರತೆಯಂತಹ ದೂರುಗಳು ಬಂದಿವೆ. ಈ ಬಗ್ಗೆ ಮುಂದೆ ಹಾಸ್ಟೆಲ್ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವಾಸ್ತವ ಪರಿಶೀಲಿಸಲಾಗುವುದು ಎಂದು ಹೇಳಿದರು.

ದಲಿತ–ಮಹಿಳಾ ಸೇರಿದಂತೆ ವಿವಿಧ ಸಂಘ– ಸಂಸ್ಥೆಗಳ, ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಆಯೋಗದ ಅಧ್ಯಕ್ಷರಿಗೆ ಅಹವಾಲು ಸಲ್ಲಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದಾಗಿ ಸಭೆಯಲ್ಲಿ ಕೆಲ ಹೊತ್ತು ಗೊಂದಲ ಉಂಟಾಯಿತು.

ಸಭೆಯಲ್ಲಿ ಆಯೋಗದ ಸದಸ್ಯರಾದ ಎಂ. ಕುಂಬಯ್ಯ, ಸುನೀಲ್ ಎಂ. ಉಕ್ಕಲಿ, ಎನ್. ದಿವಾಕರ್, ಗೀತಾ ಥಾವಂಶಿ, ಆಯೋಗದ ಕಾರ್ಯದರ್ಶಿ ಡಾ. ಎಚ್.ಎಸ್. ಶಿವರಾಮು, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಶ್ರೀನಿವಾಸ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-14-2133482052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.