ರಾಮನಗರ: ಸರ್ಕಾರದಿಂದ ಹಂಚಿಕೆಯಾಗಿರುವ ವಸತಿ ನಿವೇಶನಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಬೇಕು ಎಂದು ಆಗ್ರಹಿಸಿ, ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಅರ್ಜುನಹಳ್ಳಿ ತಾಂಡ್ಯದ ಗ್ರಾಮಸ್ಥರು ರಾಮನಗರ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.

ಸುಮಾರು 70 ಕುಟುಂಬಗಳಿರುವ ತಾಂಡ್ಯದಲ್ಲಿ 60 ಕುಟುಂಬಗಳಿಗೆ ಸ್ವಂತ ನಿವೇಶನಗಳಿಲ್ಲ. ಅದನ್ನು ಮನಗಂಡ ಸರ್ಕಾರ 2017ರಲ್ಲಿ 60 ಅಷ್ಟೂ ಮಂದಿಗೆ ನಿವೇಶನಗಳನ್ನು ಮಂಜೂರು ಮಾಡಿ ಹಕ್ಕುಪತ್ರಗಳನ್ನು ವಿತರಿಸುವಂತೆ ಸೂಚಿಸಿದೆ. ಆದರೆ, ಫಲಾನುಭವಿಗಳಿಗೆ ನಿವೇಶನಗಳು ಹಂಚಿಕೆಯಾಗದಂತೆ ಗ್ರಾಮದ ಕೆಲವರು ತಡೆಯೊಡ್ಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ನಿವೇಶನಕ್ಕೆ ಮಂಜೂರಾಗಿರುವ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಅಂತಹವರನ್ನು ತೆರವುಗೊಳಿಸಿ ಬಡ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ ಅವರು ಈ ಕುರಿತು ವಿಶೇಷ ಗಮನ ಹರಿಸಿ, ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮನವಿ ಸ್ವೀಕರಿಸಿದರು. ಗ್ರಾಮಸ್ಥರಾದ ಮುತ್ತುರಾಜು ನಾಯ್ಕ, ನಾಗೇಶ್ ನಾಯ್ಕ, ವೆಂಕಟೇಶ್ ನಾಯ್ಕ, ಮಾರಪ್ಪ ನಾಯ್ಕ, ರಾಜು ನಾಯ್ಕ, ಜಯಬಾಯಿ, ಲಕ್ಷ್ಮೀಬಾಯಿ, ನೀಲಮ್ಮಬಾಯಿ, ಪುಟ್ಟಿಬಾಯಿ, ರತ್ನಬಾಯಿ, ಸಂಪತ್ ನಾಯ್ಕ, ರೂಪ ನಾಯ್ಕ, ಅಕ್ಷಯ್ ನಾಯ್ಕ, ಮಹದೇವಿ ಬಾಯಿ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.