ರಾಮನಗರ: ‘ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಏಪ್ರಿಲ್ ತಿಂಗಳವರೆಗೆ ಒಟ್ಟು 16 ತಿಂಗಳಲ್ಲಿ 83 ಹಾವು ಕಡಿತಕ್ಕೊಳಗಾದ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾವು ಕಡಿತ ಪ್ರಕರಣದಲ್ಲಿ ಪ್ರಾಣಿ ಹಾನಿಯಾಗದಂತೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮಗಳಡಿ, ಹಾವು ಕಡಿತದಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬ ಕ್ರಮಗಳ ಕುರಿತು ಹಾಗೂ ಆ ಕ್ಷಣ ನೀಡಬೇಕಾದ ಪ್ರಥಮ ಚಿಕಿತ್ಸೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

‘ರೈತರು ಹೊಲ-ಗದ್ದೆಗಳಲ್ಲಿ ಹಾಗೂ ತೋಟಗಳಲ್ಲಿ ಕೆಲಸ–ಕಾರ್ಯಗಳನ್ನು ಮಾಡುವಾಗ, ಕೆರೆ ಬದಿ ಹಾದು ಹೋಗುವಾಗ ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಬೇಕು. ಹಾವು ಕಚ್ಚಿದಾಗ ತಕ್ಷಣ ಮಾಡಬೇಕಾದ ಪ್ರಥಮ ಚಿಕಿತ್ಸೆ ಬಗ್ಗೆಯೂ ಜಾಗೃತಿ ಅಗತ್ಯ’ ಎಂದು ಹೇಳಿದರು.

‘ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಗರ್ಭಿಣಿ-ಬಾಣಂತಿಯರು ಮನೆಗೆ ಭೇಟಿ ನೀಡಬೇಕು. ನಿಯಮಿತವಾಗಿ ಗರ್ಭಿಣಿ, ತಾಯಿ-ಮಗುವಿನ ತಪಾಸಣೆ ಮಾಡಿಸಬೇಕು’ ಎಂದು ಸಲಹೆ ನೀಡಿದರು.

‘ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗುವ ಸೊಳ್ಳೆಗಳ ಸಂತಾನೋತ್ಪತ್ತಿಗೆ ಅವಕಾಶವಿರದಂತೆ ನೀರು ನಿಲ್ಲದಂತೆ ನೋಡಿಕೊಂಡು ಸ್ವಚ್ಛತೆ ಕಾಪಾಡಬೇಕು. ಸಂಬಂಧಿಸಿದ ಇಲಾಖೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮ-ನಗರ ಪ್ರದೇಶಗಳಲ್ಲಿ ಜನ ಜಾಗೃತಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ತಿಳಿಸಿದರು.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ನಡೆಸಿದ ಜಿಲ್ಲಾಧಿಕಾರಿ, ‘ನೆರೆಯ ಪಾಕಿಸ್ತಾನ ಹಾಗೂ ಆಫ್ಗಾನಿಸ್ತಾನದಲ್ಲಿ ಪೋಲಿಯೋ ಪ್ರಕರಣ ವರದಿಯಾಗಿದೆ. ಹಾಗಾಗಿ, ದೇಶದಲ್ಲೂ ವರದಿಯಾಗದಂತೆ ತಡೆಯಲು ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಭಿಯಾನವನ್ನು ಜೂನ್ 28ರಿಂದ ಹಮ್ಮಿಕೊಳ್ಳಲಾಗುವುದು. ಅದರ ಯಶಸ್ವಿಗೆ ಅಗತ್ಯ ಸಿದ್ದತೆ ಕೈಗೊಳ್ಳಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ರೋಗವಾಹಕ ಆಶ್ರಿತ ರೋಗಳ ನಿಯಂತ್ರಣಾಧಿಕಾರಿ ಡಾ. ಪದ್ಮಾವತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಿರಣ್ ಶಂಕರ್, ಎಲ್ಲಾ ತಾಲ್ಲೂಕು ಆರೋಗ್ಯಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-14-142441311

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.