ರಾಮನಗರ ಎಸ್ಪಿ ಗಿರೀಶ್ಗೆ ಕೋವಿಡ್ ದೃಢ

ರಾಮನಗರ: ರಾಮನಗರ ಎಸ್ಪಿ ಗಿರೀಶ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಗಿರೀಶ್ ಬಿಡದಿ ಪೊಲೀಸ್ ಠಾಣೆಯಲ್ಲಿ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ದೃಢಪಟ್ಟಿತು.
ಗಿರೀಶ್ ರಾಮನಗರ ಜಿಲ್ಲೆಯಲ್ಲಿ ಈಚೆಗೆ ನಡೆದ ಮೇಕೆದಾಟು ಪಾದಯಾತ್ರೆಯಲ್ಲಿ ಪೊಲೀಸ್ ಭದ್ರತೆಯ ನೇತೃತ್ವ ವಹಿಸಿದ್ದರು. ಅವರನ್ನೂ ಒಳಗೊಂಡು ಜಿಲ್ಲೆಯ 57 ಪೊಲೀಸರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆ ಆಗಿದೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.