ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿ ಅಪಹರಣ ಪ್ರಕರಣ: ಸಾವು-ಬದುಕಿನ ನಡುವೆ ಯುವತಿ, ಯುವಕ ಪೊಲೀಸ್ ವಶಕ್ಕೆ

Published 28 ಆಗಸ್ಟ್ 2023, 5:44 IST
Last Updated 28 ಆಗಸ್ಟ್ 2023, 5:44 IST
ಅಕ್ಷರ ಗಾತ್ರ

ರಾಮನಗರ: ಯುವಕನಿಂದ ಚಾಕು ಇರಿತಕ್ಕೊಳಗಾಗಿ ಅಪಹರಣಕ್ಕೆ ಒಳಗಾದ ವಿದ್ಯಾರ್ಥಿನಿ ಸ್ಥಳೀಯ ರಾಮಕೃಷ್ಣ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದಾರೆ. ಕೃತ್ಯ ಎಸಗಿದ ಯುವಕನ ಗುರುತು ಪತ್ತೆಯಾಗಿದೆ.

ಘಟನೆ ಬಳಿಕ, ಯುವಕ ಅದೇ ಕಾರಿನಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದಾನೆ. ವಿಷಯ ಗೊತ್ತಾಗುತ್ತಿದ್ದಂತೆ, ಪೊಲೀಸರು ಆಸ್ಪತ್ರೆಗೆ ತೆರಳಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌.

ಆಸ್ಪತ್ರೆಯಲ್ಲಿರುವ ಯುವತಿ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಪ್ರೀತಿ ವಿಷಯ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ಚೇತನ್ ಡಿ.ಎನ್
ಆರೋಪಿ ಚೇತನ್ ಡಿ.ಎನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT