ರಾಮನಗರ: ‘ಜಗತ್ತಿನಲ್ಲಿ ನಿತ್ಯ ಕೋಟ್ಯಂತರ ಜನ ಜನಿಸುತ್ತಾರೆ ಮತ್ತು ಸಾಯುತ್ತಾರೆ. ಆದರೆ ಕೆಲವರಷ್ಟೇ ತಮ್ಮ ಸಾಧನೆಗಳಿಂದ ಇತಿಹಾಸದ ಪುಟಗಳನ್ನು ಸೇರಿ ಅಮರರಾಗುತ್ತಾರೆ. ವಿದ್ಯಾರ್ಥಿಗಳು ಸಹ ತಮ್ಮ ಹೆಸರು ಶಾಶ್ವತವಾಗಿ ಉಳಿಯುವಂತಹ ಸಾಧನೆ ಮಾಡಬೇಕು’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಸಿಸಿ, ರೆಡ್ ಕ್ರಾಸ್ ಹಾಗೂ ವಿವಿಧ ಸಮಿತಿಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಶಿಲೆಯೊಂದು ಉಳಿ ಪೆಟ್ಟಿನಿಂದ ವಿಗ್ರಹವಾಗುತ್ತದೆ. ಅದೇ ರೀತಿ ವಿದ್ಯಾರ್ಥಿಗಳ ಎದೆಗೆ ಅಕ್ಷರಗಳು ಬಿದ್ದಾಗ ಅವರು ಸಾಧಕರಾಗಿ ಹೊರಹೊಮ್ಮಬೇಕು’ ಎಂದರು.

ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವಿರಬೇಕು. ಯಾರಿಗೆ ಕೇಳಿಸಿಕೊಳ್ಳುವ ಶಕ್ತಿ ಇದೆಯೋ ಅವರಿಗೆ ಮಾತ್ರ ಗಟ್ಟಿಯಾಗಿ ಹೇಳುವ ಶಕ್ತಿ ಇರುತ್ತದೆ. ಬದುಕಿನ ಎಲ್ಲಾ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಸವಾಲುಗಳಾಗಿ ಸ್ವೀಕರಿಸಬೇಕು’ ಎಂದು ಕಿವಿಮಾತು ಹೇಳಿದ ಅವರು, ಜನಪದ ಗೀತೆಗಳನ್ನು ಹಾಡಿ ರಂಜಿಸಿದರು.

ಬೆಂಗಳೂರಿನ ಸಮರ್ಥನಂ ಅಂಗವಿಕಲರ ಸಂಸ್ಥೆ ಸಂಸ್ಥಾಪಕ ಡಾ. ಮಹಾಂತೇಶ್, ‘ವಿದ್ಯಾರ್ಥಿಗಳು ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಹ ಸಕ್ರಿಯವಾಗಿರಬೇಕು. ಇದರಿಂದ ಅವರ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಲಿದೆ’ ಎಂದರು.

ಕಾಲೇಜಿನ ಪ್ರಾಂಶುಪಾಲೆ ಮೇಜರ್ ಪ್ರೊ.ಲಕ್ಷ್ಮಿ ಟಿ. ಅಧ್ಯಕ್ಷತೆ ವಹಿಸಿಕೊಂಡಿದ್ದರು. ಮನೋವೈದ್ಯಯಕೀಯ ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಅಧ್ಯಾಪಕ ವರ್ಗ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-15-595284354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.