ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ನಿಧಿಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ನಾಲ್ಕು ಗ್ರಾಮಗಳಲ್ಲಿ ನಿರ್ಮಿಸಿರುವ ಸುಸಜ್ಜಿತ ಶಾಲಾ ಕಟ್ಟಡಗಳ ದಾಖಲಾತಿಗಳನ್ನು ಕಂಪನಿ ಅಧಿಕಾರಿಗಳು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರಿಗೆ ಹಸ್ತಾಂತರಿಸಿದರು.

ಕನಕಪುರ ತಾಲ್ಲೂಕಿನ ಹೆಗ್ಗನೂರಿನಲ್ಲಿನ ಸರ್ಕಾರಿ ಮಾದರಿ ಶಾಲೆ, ಮಾಗಡಿ ತಾಲ್ಲೂಕಿನ ಕುದೂರಿನ ಕರ್ನಾಟಕ ಪಬ್ಲಿಕ್ ಶಾಲೆ, ರಾಮನಗರ ತಾಲ್ಲೂಕಿನ ಅವ್ವೇರಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ರಾಮನಗರ ತಾಲ್ಲೂಕಿನ ಪಾದರಹಳ್ಳಿ ಸರ್ಕಾರಿ ಮಾದರಿ ಶಾಲೆಗಳ ನೂತನ ಕಟ್ಟಡಗಳ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ದಾಖಲಾತಿಗಳನ್ನು ಹಸ್ತಾಂತರಿಸಲಾಯಿತು.

ಮುಂಬರುವ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಈ ಕಟ್ಟಡಗಳನ್ನು ಜನಾರ್ಪಣೆ ಮಾಡಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅನುಕೂಲಕ್ಕಾಗಿ ನಾಲ್ಕೂ ಶಾಲೆಗಳಿಗೆ ಅಗತ್ಯ ಪೀಠೋಪಕರಣಗಳು, ಅಡುಗೆ ಮನೆ ಉಪಕರಣಗಳು, ಪಾತ್ರೆಗಳು, ಸಂವಾದಾತ್ಮಕ ಸ್ಮಾರ್ಟ್ ಬೋರ್ಡ್ಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಸ್.ಸ್ವಾಮಿ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಿಎಸ್ಆರ್ ವಿಭಾಗದ ಜನರಲ್ ಮ್ಯಾನೇಜರ್ ರೋಷನ್, ವ್ಯವಸ್ಥಾಪಕ ಪ್ರಶಾಂತ್, ಸಿಎಸ್ಆರ್ ನಿಧಿ ಎಂಜಿನಿಯರ್ ವರುಣದೇವ್ ಹಾಗೂ ಸಂಯೋಜಕ ರಾಮಚಂದ್ರ ಹೆಗಡೆ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-14-223085252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.