ರಾಮನಗರ: ಜೀವನದಲ್ಲಿ ಏಳು-ಬೀಳು ಸಹಜ. ಯುವಕರು ಕ್ರೀಡೆಯಲ್ಲಿ ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಉತ್ತಮ ಕ್ರೀಡಾಪಟುಗಳಾಗುವತ್ತ ಗಮನ ಹರಿಸಬೇಕು ಎಂದು ರಾಮನಗರ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ಕಿವಿಮಾತು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿಷ್ಣುನಂದನ ಚಾರಿಟಬಲ್ ಟ್ರಸ್ಟ್ ವತಿಯಿಂದ ಚಿತ್ರನಟ ವಿಷ್ಣುವರ್ಧನ್ ಅವರ ಸವಿನೆನಪಿಗಾಗಿ ಶುಕ್ರವಾರ ಆಯೋಜಿಸಿದ್ದ ರಾಮನಗರ ಪ್ರೀಮಿಯರ್ ಲೀಗ್ ನಾಲ್ಕನೇ ಆವೃತ್ತಿಯ ‘ವಿಷ್ಣುಕಪ್’ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾಜಗತ್ತಿನಲ್ಲಿ ಸೋತವರು ಗೆದ್ದಿರುವ ಮತ್ತು ಗೆದ್ದವರು ಸೋಲು ಕಂಡಿರುವ ಹಲವು ಉದಾಹರಣೆಗಳಿವೆ. ಆದ್ದರಿಂದ ಸೋಲು-ಗೆಲುವು ಮುಖ್ಯವಲ್ಲ. ಯಾವುದನ್ನೂ ಮನಸ್ಸಿಗೆ ತೆಗೆದುಕೊಳ್ಳಬಾರದು. ಯುವಕರು ಕ್ರೀಡಾ ಸ್ಫೂರ್ತಿಯಿಂದ ಆಟವಾಡಬೇಕು ಎಂದು ತಿಳಿಸಿದರು.

ಸಾಹಸಸಿಂಹ ವಿಷ್ಣುವರ್ಧನ್ ನಾಡು ಕಂಡ ಶ್ರೇಷ್ಠ ಕಲಾವಿದ. ಅವರ ಜೀವನದುದ್ದಕ್ಕೂ ಮನೆಯವರೆಲ್ಲರೂ ಕುಳಿತು ನೋಡುವಂಥ ಉತ್ತಮ ಸಂದೇಶ ನೀಡುವ ಚಿತ್ರಗಳನ್ನು ಕನ್ನಡ ನಾಡಿಗೆ ನೀಡಿದ್ದಾರೆ. ಅವರ ಚಲನಚಿತ್ರಗಳಲ್ಲಿ ತ್ಯಾಗ, ಪ್ರೀತಿ, ವಾತ್ಸಲ್ಯ ಸುಂದರವಾಗಿ ಚಿತ್ರಿಸಲಾಗಿದೆ. ಅವರ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾಡು-ನುಡಿ ಪರವಾಗಿ ಹೋರಾಟ ಮಾಡಲು ಎಲ್ಲರೂ ಮುಂದಾಗಬೇಕು. ಸ್ಥಳೀಯ ಯುವಕರು ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಯಶಸ್ವಿಯಾಗಿ ಪ್ರದರ್ಶನ ನೀಡಿ ಮುಂದೆ ಐಪಿಎಲ್ನಲ್ಲಿ ಸ್ಥಾನ ಪಡೆಯುವ ಉದಯೋನ್ಮುಖ ಆಟಗಾರರಾಗಿ ಹೊರಹೊಮ್ಮಬೇಕು ಎಂದು ಆಶಿಸಿದರು.

ಪಂದ್ಯಾವಳಿ ಆಯೋಜಕ ಎಸ್.ರಘುನಂದನ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಎನ್.ಆರ್. ಮಂಜು, ನಗರ ಘಟಕದ ಅಧ್ಯಕ್ಷ ವಿನೋದ್, ತಾಲ್ಲೂಕು ಅಧ್ಯಕ್ಷ ಪ್ರತಾಪ್, ಕರುನಾಡ ಸೇನೆ ಉಪಾಧ್ಯಕ್ಷ ಜಗದೀಶ್, ರಾಜ್ಯ ಉಸ್ತುವಾರಿ ಅಧ್ಯಕ್ಷ ವಿ.ಎಸ್.ಗಂಗಾಧರ್, ಪದಾಧಿಕಾರಿಗಳಾದ ಆರ್.ಬಿ.ಎಲ್. ಲೋಕೇಶ್, ಪುಟ್ಟರಾಜು, ನಿಖಿಲ್, ಸುರೇಶ್, ಪ್ರವೀಣ್, ನವಚೇತನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-14-836076601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.