ರಾಮನಗರ: ಅತ್ಯಂತ ಹಿಂದುಳಿದ ವಿಶ್ವಕರ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ವಿಶೇಷ ಮೀಸಲಾತಿ ಒದಗಿಸಬೇಕು. ಸರ್ಕಾರದ ಗಮನ ಸೆಳೆಯಲು ಬೀದರ್ನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿರುವ ಪಾದಯಾತ್ರೆಯು ಸುಮಾರು 40 ದಿನ ನಡೆಯಲಿದೆ. ಬೆಂಗಳೂರಿನಲ್ಲಿ ಸಮುದಾಯದ 41 ಪಂಗಡಗಳ ಜನ ಸೇರಿ ಬೃಹತ್ ಸಮಾವೇಶ ನಡೆಸಿ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

1977ರಲ್ಲಿ ಎಲ್.ಜಿ. ಹಾವನೂರು ಅವರು ನಮ್ಮ ಸಮುದಾಯದ ಕಷ್ಟಗಳನ್ನು ಗಮನಿಸದೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದ್ದಾರೆ. ಈ ಅನ್ಯಾಯದ ವಿರುದ್ಧ ಸತತವಾಗಿ ಮಾಡಿದ ಹೋರಾಟದಿಂದಾಗಿ ಸರ್ಕಾರ ಎರಡು ವರ್ಷದ ಹಿಂದೆ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ವಕರ್ಮ ಸಮಾಜದ ಸ್ಥಿತಿಗತಿ ಅರಿಯಲು ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿತು ಎಂದರು.

‘ಅಧ್ಯಯನ ನಡೆಸಿದ ಅಲ್ಲಿನ ಪ್ರಾಧ್ಯಾಪಕರು ಪೂರ್ವಗ್ರಹ ಪೀಡಿತರಾಗಿ ವಿಶ್ವಕರ್ಮ ಸಮುದಾಯವು ಯಾವುದೇ ಬುಡಕಟ್ಟು ಲಕ್ಷಣಗಳನ್ನು ಹೊಂದಿಲ್ಲ ಎಂದು ಸುಳ್ಳು ವರದಿ ನೀಡುವ ಮೂಲಕ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಆ ವರದಿಯನ್ನು ಮರು ಪರಿಶೀಲಿಸಿ ಸಮಾಜಕ್ಕೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಚಿನ್ನ-ಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಕಂಚಿನ ಕೆಲಸ, ಶಿಲ್ಪ ಕೆತ್ತನೆ ಮೂಲಕ ಬದುಕು ಕಟ್ಟಿಕೊಂಡಿರುವ ವಿಶ್ವಕರ್ಮ ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಶೈಕ್ಷಣಿಕವಾಗಿ ಅತಿ ಹಿಂದುಳಿದಿರುವ ಸಮುದಾಯಕ್ಕೆ ರಾಜಕೀಯ ಪ್ರಜ್ಞೆ ಇಲ್ಲ’ ಎಂದರು.

‘ಸಮುದಾಯದ 41 ಪಂಗಡಗಳಲ್ಲಿ ಕಮ್ಮಾ ಎಂಬುವ ಪಂಗಡಕ್ಕೆ ಕೊಳ್ಳೆಗಾಲ ತಾಲ್ಲೂಕು, ಉತ್ತರ ಕನ್ನಡ, ಮಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಲಾಗಿದೆ. ಅದೇ ಮಾದರಿಯಲ್ಲಿ ವಿಶ್ವಕರ್ಮ ಸಮಾಜದ ಎಲ್ಲ 41 ಪಂಗಡಗಳಿಗೂ ಪ್ರಮಾಣಪತ್ರ ನೀಡಬೇಕು’ ಎಂದು ಒತ್ತಾಯಿಸಿದರು.

‘ಸಮುದಾಯದ ಸಂಘಟನೆಗಾಗಿ ನಾನು ಕಳೆದ 25 ವರ್ಷಗಳಿಂದ ಹೋರಾಡುತ್ತಲೇ ಬಂದಿದ್ದೇನೆ. ಎಲ್ಲಾ ಪಕ್ಷಗಳ ಹಾಗೂ ಸರ್ಕಾರಗಳ ಅವಧಿಯಲ್ಲೂ ಸಮುದಾಯಕ್ಕೆ ಸಿಗಬೇಕಾದ ನ್ಯಾಯಯುತ ಪಾಲು ಕೊಡುವಂತೆ ಕೇಳುತ್ತಲೇ ಇದ್ದೇನೆ. ಆದರೆ, ನಮ್ಮದು ಅರಣ್ಯರೋದನವಾಗಿದೆ’ ಎಂದು ಹೇಳಿದರು.

ಮಹಾಸಭಾ ಉಪಾಧ್ಯಕ್ಷ ಬಸವರಾಜು, ಬೆಂಗಳೂರು ದಕ್ಷಿಣ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸಮುದಾಯದ ಕುಮಾರ್, ಜನಾರ್ಧನ್, ನಿಂಗರಾಜು, ಸಿದ್ದರಾಜು, ರಾಮಾಚಾರ್, ರವಿಪ್ರಕಾಶ್, ಕುಮಾರ್ ಕರೇನಹಳ್ಳಿ, ಲಕ್ಷ್ಮೀನಾರಾಯಣ್, ಸೋಮನಹಳ್ಳಿ ರಾಜೇಶ್, ಜನಾರ್ದನ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260318-14-52255610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.