ರಾಮನಗರ: ನಗರದ 27ನೇ ವಾರ್ಡ್ನಲ್ಲಿ (ವಿವೇಕಾನಂದನಗರ) ₹5 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.

ನಗರಸಭೆ ವ್ಯಾಪ್ತಿಯ ಬಿಜಿಎಸ್ ವೃತ್ತದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ವಿವೇಕಾನಂದನಗರ ವಾರ್ಡ್ ಗ್ರಾಮ ಪಂಚಾಯಿತಿಯಿಂದ ನಗರಸಭೆ ವ್ಯಾಪ್ತಿಗೆ ಸೇರ್ಪಡೆಯಾಗಿದೆ. ಇದರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಹ ಬೇಕಿದೆ ಎಂದು ಹೇಳಿದರು.

ನೆಟ್ಕಲ್ನಿಂದ ಪಟ್ಟಣಕ್ಕೆ ನೀರು ತಂದು ದಿನದ 24 ಗಂಟೆ ಕುಡಿಯುವ ನೀರು ಪೂರೈಸಲಾಗಿದೆ. ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ, ವಸತಿ ಸೇರಿದಂತೆ ಮೂಲ ಸೌಕರ್ಯಗಳಿಗೆ ಒತ್ತು ನೀಡಲಾಗಿದೆ ಎಂದರು.

ಮಾಜಿ ಶಾಸಕ ಕೆ.ರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ಕುಮಾರ್, ಮಾಜಿ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ಪವಿತ್ರಾ ಲಕ್ಷ್ಮಿಕಾಂತ, ಆಯಿಷಾಬಾನು, ಬೈರೇಗೌಡ, ಅಣ್ಣು, ಅಜ್ಮದ್, ನಾಗಮ್ಮ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗುರುಪ್ರಸಾದ್, ಅನಿಲ್ ಜೋಗೆಂದರ್, ಸ್ಥಳೀಯರು, ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-14-798530527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.