ರಾಮನಗರ: ನಗರದ ಹೊರವಲಯದ ವಡೇರಹಳ್ಳಿಯಲ್ಲಿ ನಾಲ್ಕು ಚಕ್ರದ 32 ವಾಹನಗಳಿದ್ದ ಗೋದಾಮಿನಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದರಿಂದ ಅಷ್ಟೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಇತರ 10 ವಾಹನಗಳಿಗೆ ಹಾನಿಯಾಗಿದೆ.

ಭೋಜರಾಜು ಎಂಬುವರಿಗೆ ಸೇರಿದ್ದ ಗೋಡೌನ್ನ ಹೊರಭಾಗದ ಬಯಲಿನಲ್ಲಿ ಅಂಗವಿಕಲರಿಗೆ ವಿತರಣೆ ಮಾಡುವುದಕ್ಕಾಗಿ ನಾಲ್ಕು ಚಕ್ರದ ವಾಹನಗಳನ್ನು ಸಂಗ್ರಹಿಸಿ ಇಡಲಾಗಿತ್ತು. ರಾತ್ರಿ 9.45ರ ಸುಮಾರಿಗೆ ಗೋಡೌನ್ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ಎಲ್ಲೆಡೆ ವ್ಯಾಪಿಸಿತು.

ಬೆಂಕಿ ಗಮನಿಸಿದ ಅಕ್ಕಪಕ್ಕದವರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಆದರೆ, ಅಷ್ಟೊತ್ತಿಗಾಗಲೇ ವಾಹನಗಳು ಹೊತ್ತಿ ಉರಿದಿದ್ದವು. ನಂತರ ಘಟನೆಗೆ ಕಾರಣ ಗೊತ್ತಾಗಿಲ್ಲ ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-14-1776456878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.