ರಾಮನಗರ:‘ಬೇಸಿಗೆ ಬಿಸಿಲಿನ ಬೇಗೆ ತೀವ್ರವಾಗಿದೆ. ಈಗಾಗಲೇ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಜನರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ‘ಜಿಲ್ಲೆಯ 33 ಗ್ರಾಮ ಪಂಚಾಯಿತಿಗಳ 62 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಸದ್ಯ ಅಲ್ಲಿಗೆ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಜ್ಞಾನಮೂರ್ತಿ ಎನ್.ಕೆ ಸಭೆ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರಾದ ಎಚ್.ಸಿ.ಬಾಲಕೃಷ್ಣ, ಎಚ್.ಎ.ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್, ‘ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಲಿದೆ. ಅಗತ್ಯ ಇರುವೆಡೆ ಕೊಳವೆಬಾವಿ ಕೊರೆಯಲು ಅನುಮತಿ ನೀಡಬೇಕು. 15ನೇ ಹಣಕಾಸು ಯೋಜನೆಯಡಿ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಜಿಲ್ಲೆಯ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಜಿಲ್ಲಾ ವಿಪತ್ತು ನಿಧಿ ಅನುದಾನವನ್ನು ಕೊಳವೆಬಾವಿ ಕೊರೆಯಲು ಬಳಸಬೇಕು. ಈ ಕುರಿತು ಸಚಿವರು ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದರು.

ಅದಕ್ಕೆ ಸಚಿವರು, ‘ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒ ಜಿಲ್ಲಾಮಟ್ಟದ ಸಭೆ ಕರೆಯಬೇಕು’ ಎಂದು ಸೂಚಿಸಿದರು.

ಕೊರತೆಯಾಗದಿರಲಿ: ಜಿಲ್ಲೆಯಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ, ಔಷಧ ಕೊರತೆ ಹಾಗೂ ವೈದ್ಯಕೀಯ ಪರಿಕರ ಕೊರತೆ ಕುರಿತು ಶಾಸಕರು, ಕೆಡಿಸಿ ಸದಸ್ಯರು ಪ್ರಸ್ತಾಪಿಸಿದರು. ಇದಕ್ಕೆ ಸಚಿವ ರಾಮಲಿಂಗಾ ರೆಡ್ಡಿ, ‘ಆಸ್ಪತ್ರೆಗಳಲ್ಲೂ ಯಾವುದಕ್ಕೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದಂತೆ ಕೆಲಸ ಮಾಡಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಅವರಿಗೆ ನಿರ್ದೇಶನ ನೀಡಿದರು.

ದರಖಾಸ್ತು ಪೋಡಿ ಆಂದೋಲನ, ಪೌತಿ ಖಾತೆ ಆಂದೋಲನ ಸೇರಿದಂತೆ ಇನ್ನಿತರ ಕಾರ್ಯಕ್ರಮ ಕುರಿತು ಸಾರ್ವಜನಿಕರ ಜೊತೆಗೆ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರೆ ಹೆಚ್ಚು ಜನರಿಗೆ ಅನುಕೂಲವಾಗುತ್ತದೆ. ಜಮೀನು ಪೋಡಿ, ಪಹಣಿ, ಇಂಡೀಕರಣ ಇನ್ನಿತರ ದಾಖಲೆಗಳಿಗೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ನೀಡಿದ ವರದಿಗೆ ತಹಶೀಲ್ದಾರರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಜನ ದೂರುತ್ತಿದ್ದಾರೆ ಎಂದು ಶಾಸಕ ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.

ಅದಕ್ಕೆ ಸಚಿವರು, ‘ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಪರಿಶೀಲಿಸಬೇಕು. ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು’ ಎಂದು ಭೂ ಮಾಪನಾ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆ ಉಪನಿರ್ದೇಶಕ ಹನುಮೇಗೌಡ ಹಾಗೂ ತಹಶೀಲ್ದಾರರಿಗೆ ಸೂಚಿಸಿದರು.

ಮುನ್ನೆಚ್ಚರಿಕೆಗೆ ಸೂಚನೆ: ‘ಪ್ರಸಕ್ತ ವರ್ಷ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಂಭವವಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ವಹಿಸಬೇಕು. ಕೃಷಿ ಭಾಗ್ಯ, ಕೃಷಿ ಸಿಂಚಾಯಿ, ಕೃಷಿ ಯಾಂತ್ರಿಕರಣ, ಕರ್ನಾಟಕ ರೈತ ಸಮೃದ್ಧಿ ಯೋಜನೆ ಇನ್ನಿತರ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಜೇಷ್ಠತೆಗಳಿಗನುಗುಣವಾಗಿ ಆಯ್ಕೆ ಮಾಡಬೇಕು. ಜಿಲ್ಲೆಯ ಹೆಚ್ಚಿನ ರೈತರಿಗೆ ಕೃಷಿ ಇಲಾಖೆ ಸೌಲಭ್ಯ ದೊರಕಿಸಿ ಕೊಡಲು ಕೃಷಿ ಇಲಾಖೆ ಅಧಿಕಾರಿಗಳು ಕೆಲಸ ಮಾಡಬೇಕು’ಎಂದು ಸೂಚನೆ ನೀಡಿದರು.

ವಾಹನ ಸುಗಮ ಸಂಚಾರಕ್ಕಾಗಿ ರಸ್ತೆ ಬದಿಗಳಲ್ಲಿ ಬೇಕಾಬಿಟ್ಟಿಯಾಗಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ, ರಸ್ತೆ ವಿಭಜಕ ಹಾಗೂ ಬೇಲಿ ಸ್ವಚ್ಛಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಸಲಹೆ ನೀಡಿದರು. ಇದಕ್ಕೆ ಸಚಿವರು, ‘ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯರಸ್ತೆಗಳ ಬದಿಯಲ್ಲಿ ಬೆಳೆದಿರುವ ಜಂಗಲ್ ತೆರವುಗೊಳಿಸಬೇಕು. ಡಾಂಬರು ರಸ್ತೆಗಳಲ್ಲಿ ಉಂಟಾಗಿರುವ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು ಡಾ.ಬಾಬು ಜಗಜೀವನ್ ರಾಂ ಭವನ ನಿರ್ಮಾಣ ಮಾಡಬೇಕು. ಈ ಕುರಿತು ಸಮಾಜ ಕಲ್ಯಾಣ ಇಲಾಖೆಗೆ ನಾವು ಮನವಿ ನೀಡಿದ್ದೇವೆ. ಈ ಕುರಿತು ಕ್ರಮ ವಹಿಸಬೇಕು’ ಎಂದು ಕೆಡಿಸಿ ಸದಸ್ಯ ಗುರುಮೂರ್ತಿ ಒತ್ತಾಯಿಸಿದರು. ಮನವಿ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಪೂರಕವಾಗಿ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ‘ರಾಮನಗರ ಮತ್ತು ಹಾರೋಹಳ್ಳಿ ವ್ಯಾಪ್ತಿಯಲ್ಲಿ 25 ಅಂಬೇಡ್ಕರ್ ಭವನಗಳಿಗೆ ಜಾಗ ಗುರುತಿಸಲಾಗಿದೆ. ಕಾಮಗಾರಿ ನಡೆಯುತ್ತಿದೆ’ ಎಂದರು.

ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್, ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗಡೆ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಗಂಗಾಧರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ವೇದಿಕೆಯಲ್ಲಿದ್ದರು. ಕೆಡಿಪಿ ಸಭೆ ನಾಮನಿರ್ದೇಶಿತ ಸದಸ್ಯರಾದ ಮುಕುಂದ, ಸುಕನ್ಯಾ, ದೌಲತ್ ಪಾಷ ಅವರು ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದರು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-14-569495087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.