ರಾಮನಗರ: ಮಹಿಳಾ ಮೀಸಲಾತಿಗೆ ಆಗ್ರಹಿಸಿ ಕಾಂಗ್ರೆಸ್ ಮಹಿಳಾ ಘಟಕ ಹಾಗೂ ಕಾರ್ಮಿಕ ಘಟಕದ ಪದಾಧಿಕಾರಿಗಳು ನಗರದ ಕಾಂಗ್ರೆಸ್ ಕಚೇರಿ ಮುಂಭಾಗ ಶನಿವಾರ ಸಹಿ ಚಳುವಳಿ ನಡೆಸಿದರು.

ಮಹಿಳೆಯರಿಗೆ ಸಾರ್ವಜನಿಕ ಜೀವನದ ಎಲ್ಲ ಕ್ಷೇತ್ರಗಳ ಜೊತೆಗೆ ಶಾಸನ ಮಂಡಳಿಗಳಲ್ಲಿಯೂ ಸೂಕ್ತ ಪ್ರತಿನಿಧಿತ್ವ ದೊರಕಬೇಕು ಎಂಬ ನಿಲುವು ನಮ್ಮದು. ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳೆಯರ ಪರವಿದ್ದು ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೋಕಿಲಾರಾಣಿ ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಎನ್ಡಿಎ ಸರ್ಕಾರ 2023ರಲ್ಲಿ ಸಂಸತ್ತಿನಲ್ಲಿ ಮಂಡನೆಯಾದ ನಾರಿ ಶಕ್ತಿ ವಂದನ ಅಧಿನಿಯಮವನ್ನು ತಕ್ಷಣ ಜಾರಿಗೆ ತರಬೇಕು. ಶೇ33 ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಮಹಿಳಾ ಮೀಸಲಾತಿ ವಿಷಯದಲ್ಲಿ ಕೇವಲ ಮೊಸಳೆ ಕಣ್ಣೀರು ಸುರಿಸುವ ಬದಲು, ಕೇಂದ್ರ ಸರ್ಕಾರ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲಿ ಶೇ33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಲಿ. ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆಗೆ ಲಿಂಕ್ ಮಾಡದೆ ಈ ಕೂಡಲೇ ಜಾರಿಗೊಳಿಸಲಿ ಎಂದು ಸಾಂಕೇತಿಕವಾಗಿ ಸಹಿ ಸಂಗ್ರಹ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಅಡ್ಡಿಯಾಗಿದೆ ಎಂಬ ಆರೋಪ ಮಾಡುತ್ತಿರುವ ಬಿಜೆಪಿಯದ್ದು ಕೇವಲ ಗಿಮಿಕ್ ರಾಜಕೀಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕ ಸ್ವಾವಲಂಬನೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಕಾಂಗ್ರೆಸ್ ಪಕ್ಷ ಕಟಿಬದ್ಧವಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಪುಟ್ಟರಾಜು ಹೇಳಿದರು.

ಸಹಿ ಸಂಗ್ರಹ ಚಳುವಳಿಯಲ್ಲಿ ನಗರಸಭೆ ಸದಸ್ಯೆ ನಾಗಮ್ಮ, ಶೋಭ, ಪುಷ್ಪಲತಾ, ಸುಮಿತ್ರ ಜಯಲಕ್ಷ್ಮಿ, ಅಸ್ಮಾ, ಅಕಿಲಾಬಾನು, ಕಾರ್ಮಿಕ ಘಟಕದ ಪದಾಧಿಕಾರಿಗಳಾದ, ದೇವರಾಜು, ಕೂಟಗಲ್ ಸಿದ್ದರಾಜು, ಕನಕಪುರ ರವಿಕುಮಾರ್, ರಾಜ್ ಮಹೇಂದರ್, ಕನಕಮೂರ್ತಿ ಮಹಮ್ಮದ್ ಶಕೀಲ್, ಮುಜೀಬ್ ಉಲ್ಲಾಖಾನ್, ಸುಂದರ್, ಮಹಮ್ಮದ್ ಹಬೀದ್, ಲೋಕೇಶ್ ಗೌಡ,ಎಂ.ಸಿ.ಸ್ವಾಮಿ, ಮೋಹನ್ ಸೇರಿದಂತೆ ಹಲವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-14-272566342

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.